ಚಿಕ್ಕಮಗಳೂರು:ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ವೈಎಸ್​ವಿ ದತ್ತಾಗೆ ಅವರು ಕಡೂರು ಕ್ಷೇತ್ರದಿಂದ ಸ್ಪರ್ಧಿಸುಲು ಸಜ್ಜಾಗಿದ್ದರು. ಆದರೆ ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲ ದತ್ತಾ ಹೆಸರು ಇರಲಿಲ್ಲ. ಇದೀಗ ಕಾಂಗ್ರೆಸ್​ನಿಂದ ಟಿಕೆಟ್ ಕೈತಪ್ಪುತ್ತಿದ್ದಂತೆ ವೈಎಸ್​ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ:ಏ. 9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಗೆಲ್ಲುವ ಪಕ್ಷವಾದ್ದರಿಂದ ಟಿಕೆಟ್​ಗಾಗಿ ಪೈಪೋಟಿ ಸಹಜ; ಸಿಎಂ ಬೊಮ್ಮಾಯಿ
ಪಕ್ಷೇತರ ಅಭ್ಯರ್ಥಿಯಾಗಿ ವೈಎಸ್ ವಿ ದತ್ತ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾರ್ಯಕರ್ತರ ಸಭೆಯಲ್ಲಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಪ್ತರು ಹಾಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ವೈಎಸ್​ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.
ಟಿಕೆಟ್ ತಪ್ಪಿದ ಹಿನ್ನೆಲೆ ದತ್ತಾ ಅವರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ವೈಎಸ್​ವಿ ದತ್ತಾ ಅವರು ಒಪ್ಪಿಗೆ ನೀಡಿದ್ದು, ಅವರ ನಿರ್ಧಾರಕ್ಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಇದನ್ನೂ ಓದಿ:ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತಾಗಿ ವೈಎಸ್​ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋವೊಂದು ಈ ಹಿಂದೆ ವೈರಲ್ ಆಗಿತ್ತು. ಇದು ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಇದರಿಂದಾಗಿ ವೈಎಸ್​ವಿ ದತ್ತಾ ಅವರಿಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − seven =
Remember me
