ಕಡೂರು:ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ವೈಎಸ್​ವಿ ದತ್ತ, ತಮ್ಮ ಮುಂದಿನ ನಿರ್ಧಾರವನ್ನು ಭಾನುವಾರ ಪ್ರಕಟಿಸಲಿರುವುದಾಗಿ ಹೇಳಿದ್ದಾರೆ. ಟಿಕೆಟ್ ವಂಚಿತರಾದ ಕುರಿತು ಕಡೂರಿನ ಯಗಟಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಜೆಡಿಎಸ್ ಬಿಟ್ಟು ಕಾಂಗ್ರೆಸ್​ಗೆ ಸೇರ್ಪಡೆ ಆಗಿರುವ ವೈಎಸ್​ವಿ ದತ್ತ ಕಡೂರು ಕ್ಷೇತ್ರದಿಂದ ಸ್ಪರ್ಧಿಸುಲು ಸಜ್ಜಾಗಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲೂ ದತ್ತ ಹೆಸರು ಇರಲಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಟಿಕೆಟ್ ನೀಡುವುದಕ್ಕೂ ಮುಂಚೆ ಬೇರೆ ಕ್ಷೇತ್ರಗಳಲ್ಲಿ ನಡೆಸಿದ ಪ್ರಕ್ರಿಯೆ ನಮ್ಮಲ್ಲೂ ನಡೆಸಬಹುದಿತ್ತು. ಟಿಕೆಟ್ ಘೋಷಣೆಯಾದ ಬಳಿಕವೂ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ನಾನು ಬಾಡಿಗೆ ಕಾರಿನಲ್ಲಿ ತಿರುಗುತ್ತೇನೆ, ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರವಾಸ ಮಾಡುತ್ತೇನೆ. ವರಿಷ್ಠರು ನನ್ನನ್ನು ಹೇಗೆ ಬೇಕಾದರೂ ಸಂಪರ್ಕ ಮಾಡಬಹುದಿತ್ತು, ಆದರೆ ಅವರು ಸಂಪರ್ಕಿಸಿರಲಿಲ್ಲ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ವರಿಷ್ಠರು ದತ್ತನ ಶಕ್ತಿ ಭಾರಿ ಗೌಣ, ಏನೂ ತೊಂದರೆ ಆಗುವುದಿಲ್ಲ ಎಂದು ಭಾವಿಸಿರಬಹುದು. ವರಿಷ್ಠರ ನಡೆಯಿಂದ ನನ್ನ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ನಿಮ್ಮನ್ನು ಕರೆಸಿ ಮಾತನಾಡದಿರುವುದು ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಸ್ವಾಭಿಮಾನದ ಪದ ಬಳಕೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?
ನಾನು ಯಾವುದೇ ಷರತ್ತು ಹಾಕಿ ಪಕ್ಷಕ್ಕೆ ಸೇರಿದವನಲ್ಲ. ಸಮೀಕ್ಷೆಯಲ್ಲಿ ಹಾಗೂ ಜನ ಅಭಿಪ್ರಾಯದಲ್ಲಿ ನನ್ನ ಹೆಸರು ಬರಬಹುದು ಎಂದು ಭಾವಿಸಿದ್ದೆ. ಸಮೀಕ್ಷೆ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾರೆ ಎಂದು ತಿಳಿದಿದ್ದೆ. ಸಮೀಕ್ಷೆ ಬಗ್ಗೆ ಪೂರ್ಣವಾಗಿ ನಂಬಿಕೆ ಇಟ್ಟಿದ್ದೆ. ನಾನು ಸಾಮಾನ್ಯರಲ್ಲಿ ಸಾಮಾನ್ಯ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ, ಹಣ ಬಲವಿಲ್ಲ. ನಾನು ನನ್ನ ಜನರನ್ನು ನಂಬಿಕೊಂಡಿದ್ದೇನೆ. ನನ್ನ ಅಭಿಮಾನಿಗಳು ಹಾಗೂ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಕುಟುಂಬದಲ್ಲಿ ಸೂತಕ ಆವರಿಸಿದ ರೀತಿ ವಾತಾವರಣ ನಿರ್ಮಾಣವಾಗಿದೆ. ನನ್ನನ್ನು ನಂಬಿದವರಿಗೆ ಅನ್ಯಾಯ ಮಾಡಲು ನಾನು ತಯಾರಿಲ್ಲ. ಭಾನುವಾರ ಕಾರ್ಯಕರ್ತರ ಸಮ್ಮುಖದಲ್ಲಿ ನಾನು ನನ್ನ ನಿರ್ಧಾರ ತಳೆಯುತ್ತೇನೆ ಎಂದು ವೈಎಸ್​ವಿ ದತ್ತ ತಿಳಿಸಿದ್ದಾರೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 2 =
Remember me
