ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,
ಬೇವು ಬೆಲ್ಲ ನಮ್ಮವು.

ಹೊಸತು ವರುಷ, ಹೊಸತು ಹರುಷ-
ಹೊಸತು ಬಯಕೆ ನಮ್ಮವು
ತಳಿರ ತುಂಬಿದಾಸೆಯೆಲ್ಲ,
ಹರಕೆಯೆಲ್ಲ ನಮ್ಮವು.

ಬಂಜೆ ನೆಲಕೆ ನೀರನೂಡಿ
ಹೊಳೆಯ ದಿಕ್ಕು ಬದಲಿಸಿ
ಕಾಡ ಕಡಿದು ದಾರಿ ಮಾಡಿ
ಬೆಟ್ಟ ಸಾಲ ಕದಲಿಸಿ.

ಹಿಮಾಚಲ ನೆತ್ತಿಯಲಿ
ಧ್ವಜವನಿಟ್ಟು ಬಂದೆವು;
ಧ್ರುವಗಳಲ್ಲಿ ಹೆಜ್ಜೆಯೂರಿ
ಹೊಸನೆಲೆಗಳ ಕಂಡೆವು.


ಬಾನಸೆರೆಯ ಕಲ್ಪಲತೆಗೆ
ನಮ್ಮ ಕಿಡಿಯ ಮುತ್ತಿಗೆ.
ಮುಗಿಯಬಹುದು ನಾಳೆಯೊಳಗೆ
ದೇವತೆಗಳ ಗುತ್ತಿಗೆ!

ಹುಟ್ಟು ಬೆಂಕಿ ನಮ್ಮ ತಾಯಿ;
ಉಟ್ಟ ಸೀರೆ ಸಾಗರ.
ಅವಳ ಮುಗಿಲ ತುರುಬಿನಲ್ಲಿ
ಹೆಡೆಯ ತೆರೆದ ನಾಗರ.

ಅವಳ ಪ್ರೀತಿ ನಮಗೆ ದೀಪ;
ಅವಳ ಕಣ್ಣು ಕಾವಲು.
ಬಿಸಿಲ ತಾಪ, ಮಳೆಯ ಕೋಪ-
ಸಂತೋಷವೇ ಆಗಲೂ.

ಹೆಜ್ಜೆಗೊಂದು ಹೊಸ ಯುಗಾದಿ-
ಚೆಲುವು ನಮ್ಮ ಜೀವನ!
ನಮ್ಮ ಹಾದಿಯೋ ಅನಾದಿ,
ಪಯಣವೆಲ್ಲ ಪಾವನ.
|ಕೆ.ಎಸ್. ನರಸಿಂಹಸ್ವಾಮಿ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eight + 13 =
Remember me
