ಬೆಂಗಳೂರು:ಹಿಂದುಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ವಿುಕ ದಿನವನ್ನಾಗಿ ವಿಶೇಷವಾಗಿ ಆಚರಿಸಲು ರಾಜ್ಯದ ಧಾರ್ವಿುಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸರ್ಕಾರ ಮುಜುರಾಯಿ ಇಲಾಖೆಗೆ ಸೂಚನೆ ನೀಡಿದೆ. ರಾಜ್ಯದ ಅನೇಕ ಇಲಾಖೆಗಳು ವರ್ಷದ ಒಂದು ದಿನವನ್ನು ಇಲಾಖೆಯ ದಿನವನ್ನಾಗಿ ಆಚರಿಸುತ್ತಾರೆ. ಅದೇ ರೀತಿ ಧಾರ್ವಿುಕ ದತ್ತಿ ಇಲಾಖೆಯೂ ಧಾರ್ವಿುಕ ಹಿನ್ನಲೆ ಮತ್ತು ಮನೋಭಾವ ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು ಧಾರ್ವಿುಕ ದಿನವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ ಎಂದು ಸರ್ಕಾರ ಹೇಳಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಚಂದ್ರಮಾನ ಯುಗಾದಿಯನ್ನು, ಇನ್ನು ಕೆಲವು ಭಾಗಗಳಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ಮುಜುರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಧಾರ್ವಿುಕ ದಿನ ಆಚರಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + nine =
Remember me
