ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾಗಿದ್ದ ಯುವನಿಧಿ ಯೋಜನೆ ಯಾಕಿನ್ನು ಜಾರಿಗೆ ಬಂದಿಲ್ಲ ಎಂದು ಜನಸಾಮಾನ್ಯರು ನಿರಂತರವಾಗಿ ಪ್ರಶ್ನಿಸುತ್ತಿದ್ದರು. ಇದೀಗ ಈ ಯೋಜನೆ ಜಾರಿಗೆ ಬರಲು ಸಮಯ ಕೂಡಿ ಬಂದಿದ್ದು, 2024ರ ಮೊದಲ ತಿಂಗಳಲ್ಲಿ ಯುವನಿಧಿಗೆ ಅಧಿಕೃತ ಚಾಲನೆ ಸಿಗಲಿದೆ ಎಂಬ ಮಾಹಿತಿ ಲಭಿಸಿದೆ.
ಇದನ್ನೂ ಓದಿ:ಕಾಟೇರಾ ಸಿನಿಮಾ ಬಗ್ಗೆ ಮನಬಿಚ್ಚಿ ಮಾತಾಡಿದ ಅವಿನಾಶ್
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ.
ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಇದನ್ನೂ ಓದಿ:ಬಹುನಿರೀಕ್ಷಿತ ‘D50’ ಬಗ್ಗೆ ಹೊಸ ಅಪ್ಟೇಟ್​ ಕೊಟ್ಟ ನಟ ಧನುಷ್​!
ಯುವನಿಧಿ ಯೋಜನೆ ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಪ್ರಕ್ರಿಯೆ ಹೇಗಿರಲಿದೆ? ಎಂಬ ಮಾಹಿತಿಯನ್ನು ಸರಳವಾಗಿ ಈ ಕೆಳಗಿನ ವಿಡಿಯೋದಲ್ಲಿ ತಿಳಿಸಿಕೊಡಲಾಗಿದೆ ಲಿಂಕ್ ಕ್ಲಿಕ್ ಮಾಡಿ, ವೀಕ್ಷಿಸಿ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seventeen =
Remember me
