ಮೈಸೂರು:ಮಾಜಿ ಸಚಿವ ಜಮೀರ್ ಅಹ್ಮದ್​ ವಿರುದ್ಧ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಮತ್ತೊಮ್ಮೆ ಗುಡುಗಿದ್ದು, ಜಮೀರ್​ ಒಬ್ಬ ಪುಟ್ಪಾತ್​ ಗಿರಾಕಿ ಎಂದು ಜರಿದಿದ್ದಾರೆ.
ಕೆ.ಆರ್.ನಗರ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಜಮೀರ್ ಬೀದಿಯಲ್ಲಿ ನಿಂತಿದ್ದ. ಎಲ್ಲೆಲ್ಲೋ ಬಸ್ ಓಡಿಸಿಕೊಂಡಿದ್ದ ಅವನನ್ನು ದೇವೇಗೌಡರ ಕುಟುಂಬ ಕರೆದುಕೊಂಡು ಬಂದು ಎಂಎಲ್‌ಎ‌ ಮಾಡಿದರು. ಆದರೆ, ಅವರ ಕುಟುಂಬದ ಬೆನ್ನಿಗೆ ಚೂರಿ ಹಾಕಿದ. ಅಂಥವನು ನನ್ನ ಬಗ್ಗೆ ಮಾತಾಡುತ್ತಾನೆ ಎಂದು ಕಿಡಿಕಾರಿದರು.ಸಿಎಎ ವಿಚಾರದಲ್ಲಿ ನಾನು ಪ್ರಚೋದನಕಾರಿ ಭಾಷಣ ಮಾಡಿಲ್ಲ. ನನ್ನ ಅಭಿಪ್ರಾಯ ಹೇಳಿದ್ದೇನೆ. ಕ್ರಿಮಿನಲ್ ಕೇಸ್ ದಾಖಲಿಸುವ ತಪ್ಪು ಮಾಡಿಲ್ಲ. ಸಿಎಎ ಜಾರಿಯಾದರೆ ಬೆಂಕಿ ಹಚ್ಚುತ್ತೇವೆ ಎಂದಿದ್ದು ಯು.ಟಿ.ಖಾದರ್. ಕಾಂಗ್ರೆಸ್- ಜೆಡಿಎಸ್ ನಾಯಕರಿಗೆ ನಾನು ಸವಾಲು ಹಾಕುತ್ತೇನೆ. ನಿಮಗೆ ತಾಕತ್ತಿದ್ದರೆ ಪ್ರಚೋದನಾಕಾರಿ ಮಾತನಾಡಿದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ. ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದರು.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 16 =
Remember me
