ಬೆಂಗಳೂರು:ರಾಜ್ಯದಲ್ಲಿ ಈವರೆಗೂ ಯಾವುದೇ ವ್ಯಕ್ತಿಯಲ್ಲಿ ಝಿಕಾ ವೈರಾಣು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಢಪಟ್ಟಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಾಣು ಇರುವ ಬಗ್ಗೆ 10 ದಿನಗಳ ಹಿಂದೆಯೇ ಪ್ರಯೋಗಾಲಯದ ವರದಿ ಬಂದಿದೆ. ಆ ಭಾಗದಲ್ಲಿ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾದವರ ಮಾದರಿಯನ್ನು ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆಯಿದೆ. ವೈರಾಣು ತಡೆಗೆ ಸಂಬಂಧಿಸಿದಂತೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದರು.
ಎಚ್ಚರ ವಹಿಸಿ:ಝಿಕಾ ವೈರಾಣು ಸೋಂಕಿಗೆ ಒಳಗಾದವರಿಗೆ ಜ್ವರ, ದದ್ದು, ಕೀಲು ನೋವು ಸೇರಿ ವಿವಿಧ ಲಕ್ಷಣ ಕಾಣಿಸಿಕೊಳ್ಳುತ್ತವೆ. ಗರ್ಭಿಣಿ ಹಾಗೂ ಬಾಣಂತಿಯರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
