ಬೆಂಗಳೂರು:ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಪದೇಪದೆ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚೂ ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ‌ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ‌ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದೆ.
ದಂಡದ ಮೊತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ತಲಾ 2 ಲಕ್ಷ ರೂ. ಮತ್ತು 1 ಲಕ್ಷ ರೂ.ಗಳನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಆದೇಶಿಸಿದೆ.
ಶ್ರೀರಾಮುಲುಗೆ ಶಾಕ್​ ಕೊಟ್ಟ ವಜಾಗೊಂಡ ಬಿಎಂಟಿಸಿ ನೌಕರ: ಸಾರಿಗೆ ಸಚಿವರ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಲು ಸಜ್ಜು

ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
