ಬೆಂಗಳೂರು:ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸೀಮೆ ನಿರ್ಣಯ ಸಂಬಂಧ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.ಈ ಮಾರ್ಗಸೂಚಿ ಅನ್ವಯ ಆಯಾ ಕ್ಷೇತ್ರಗಳ ಗಡಿಯನ್ನು ಗುರಿಸಿಸಬೇಕು. ಗಡಿ ಗುರುತಿಸಿದ ಬಳಿಕ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಪರಿಶೀಲಿಸಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ತಾಲೂಕು ಪಂಚಾಯಿತಿ:ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸುವಾಗ 2.30 ಮೀರಿದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ಚುನಾಯಿತ ಸದಸ್ಯನು ಇರತಕ್ಕದು. 1 ಲಕ್ಷ ಮೀರಿದ ಆದರೆ 2.30 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರಕ್ಕೆ ಕಡಿಮೆಯಿಲ್ಲದ, ಜನಸಂಖ್ಯೆಗೆ ಒಬ್ಬ ಚುನಾಯಿತ ಸದಸ್ಯನು ಇರತಕ್ಕದ್ದು ಹಾಗೂ ಅಲ್ಲಿ ಕನಿಷ್ಟ 11 ಚುನಾಯಿತ ಸದಸ್ಯರು ಇರತಕ್ಕದ್ದು.50 ಸಾವಿರ ಮೀರಿದ ಆದರೆ 1ಲಕ್ಷ ಮೀರಿರದ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಕನಿಷ್ಟ 9 ಚುನಾಯಿತ ಸದಸ್ಯರು ಇರಬೇಕು.50ಸಾವಿರಕ್ಕಿಂತ ಕಡಿಮೆಯಿರುವ ಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ತಾಲೂಕುಗಳಲ್ಲಿ ಕನಿಷ್ಟ 7ಚುನಾಯಿತ ಸದಸ್ಯರಿರತಕ್ಕದ್ದು.ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯನ್ನು ತಾಲೂಕಿನಲ್ಲಿರುವ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವ/ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನಗೊಂಡಿರುವ ಗ್ರಾಮಾಂತರ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಗ್ರಾಮೀಣ ಪ್ರದೇಶಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು.ತಾಲೂಕಿನಲ್ಲಿರುವ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರದೊಳಗೆ ಎಷ್ಟು ತಾಲೂಕು ಪಂಚಾಯತಿ ಕ್ಷೇತ್ರಗಳನ್ನು ರಚಿಸಬಹುದೋ ಅಷ್ಟು ಕ್ಷೇತ್ರಗಳನ್ನು ಆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯೊಳಗೆ ಅಳವಡಿಸಿ ರಚಿಸಬೇಕು.ಜಿಲ್ಲಾ ಪಂಚಾಯಿತಿ ಕ್ಷೇತ್ರದೊಗಳಗೆ ಬರುವ ಪೂರ್ಣ ಗ್ರಾಮ ಪಂಚಾಯಿತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಒಟ್ಟುಗೂಡಿಸಿ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ನಿರ್ಧರಿಸಬೇಕು ಹಾಗೂ ಅದು ಸಾಧ್ಯವಾಗದೇ ಇದ್ದರೆ ಗ್ರಾಮಗಳನ್ನು ಗುಂಪು ಮಾಡಬೇಕು. ಗುಂಪುಗಳನ್ನು ಮಾಡುವ ಸಂದರ್ಭದಲ್ಲಿ ಮೂಲಗ್ರಾಮಗಳನ್ನು ವಿಭಜಿಸುವಂತಿಲ್ಲ. ಕಂದಾಯ ಗ್ರಾಮದ ದಾಖಲೆ ಗ್ರಾಮಗಳನ್ನು ಬೇರೆಯಾಗಿ ವಿಂಗಡಿಸದೆ ಕಂದಾಯ ಗ್ರಾಮದೊಳಗೆ ಇರುವಂತೆ ನೋಡಿಕೊಳ್ಳಬೇಕು.
ತಾಲೂಕು ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ ಕ್ಷೇತ್ರದೊಳಗೆ ಒಟ್ಟುಗೂಡಿಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಒಂದು ತಾಲ್ಲೂಕು ಪಂಚಾಯಿತಿ ಕ್ಷೇತ್ರವು ಎರಡು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ವಿಭಜಿಸಿ ಸೇರಿಸತಕ್ಕದ್ದಲ್ಲ. ಪ್ರತಿಯೊಂದು ಚುನಾವಣಾ ಕ್ಷೇತ್ರಗಳ ಜನಸಂಖ್ಯೆಯಲ್ಲಿ ಸಾಧ್ಯವಾಗುವಷ್ಟರ ಮಟ್ಟಿಗೆ ಹೆಚ್ಚಿನ ವ್ಯತ್ಯಾಸವಿರದಂತೆ ನಿಗಾವಹಿಸತಕ್ಕದ್ದು.ಹೊಸದಾಗಿ ರಚಿಸುವ ತಾಲೂಕು ಪಂಚಾಯಿತಿ ಕ್ಷೇತ್ರಗಳ ಹೆಸರನ್ನು 2015ರ ಅಧಿಸೂಚನೆಯಲ್ಲಿ ಇದ್ದಂತೆ ನಿಗದಿಪಡಿಸುವುದು. 2015ರ ಅಧಿಸೂಚನೆಯಲ್ಲಿ ಇಲ್ಲದಿದ್ದಲ್ಲಿ ಸದರಿ ಕ್ಷೇತ್ರಗಳಲ್ಲಿನ ಅತಿ ಹೆಚ್ಚು, ಜನಸಂಖ್ಯೆಯಿರುವ ಗ್ರಾಮದ ಹೆಸರನ್ನು ಈ ಚುನಾವಣಾ ಕ್ಷೇತ್ರದ ಹೆಸರನ್ನಾಗಿ ಪರಿಗಣಿಸತಕ್ಕದ್ದು.ಜತೆಗೆ ಅತೀ ಹೆಚ್ಚು ಜನಸಂಖ್ಯೆ ಇರುವ ಗ್ರಾಮದ ಹೆಸರನ್ನಲ್ಲದೇ, ಐತಿಹಾಸಿಕ, ಶೈಕ್ಷಣಿಕ, ಸಾಂಸ್ಕೃತಿಕ, ವಾಣಿಜ್ಯ, ಇತ್ಯಾದಿ ಮಹತ್ವವಿರುವ ಗ್ರಾಮದ ಹೆಸರನ್ನು ಪರಿಗಣಿಸತಕ್ಕದ್ದು.
ಜಿಲ್ಲಾ ಪಂಚಾಯಿತಿ:ಜಿಲ್ಲಾ ಪಂಚಾಯಿತಿ ಚುನಾಯಿತ ಸದಸ್ಯರಲ್ಲಿ, ಜಿಲ್ಲೆಯ ತಾಲ್ಲೂಕುಗಳಿಂದ 25ಕ್ಕಿಂತಲೂ ಕಡಿಮೆ ಇಲ್ಲದಂತೆ ಚುನಾಯಿತ ಸದಸ್ಯರಿರತಕ್ಕದ್ದು. ಪ್ರತಿಯೊಂದು ತಾಲೂಕಿನಿಂದ ಚುನಾಯಿತರಾಗಕ್ಕೆ ಸದಸ್ಯರ ಸಂಖ್ಯೆಯನ್ನು 40 ಸಾವಿರ ಜನಸಂಖ್ಯೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಸದಸ್ಯನಂತೆ ನಿಗದಿಪಡಿಸಲಾಗಿದೆ.ಚಿಕ್ಕಮಗಳೂರು, ತರೀಕರೆ, ಕಡೂರು, ಅಜ್ಜಂಪುರ ತಾಲ್ಲೂಕುಗಳನ್ನು ಹೊರತುಪಡಿಸಿ, ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳ ಸಂದರ್ಭದಲ್ಲಿ ಪ್ರತಿ ಇಪ್ಪತ್ತೊಂದು ಸಾವಿರ ಗ್ರಾಮೀಣ ಜನಸಂಖ್ಯೆಗೆ ಅಥವಾ ಅದರ ಭಾಗಕ್ಕೆ ಒಬ್ಬ ಸದಸ್ಯರಂತೆ ನಿಗದಿಪಡಿಸಲಾಗಿದೆ.7ಲಕ್ಷಕ್ಕಿಂತ ಹೆಚ್ಚಿನ ಆದರೆ 9.50 ಲಕ್ಷ ಮೀರಿರದಗ್ರಾಮೀಣ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಯ ಸಂದರ್ಭದಲ್ಲಿ, 28 ಚುನಾಯಿತ ಸದಸ್ಯರು ಇರತಕ್ಕದ್ದು.ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವ/ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನಗೊಂಡಿರುವ ಗ್ರಾಮಾಂತರ ಪ್ರದೇಶಗಳನ್ನು ಹೊರತುಪಡಿಸಿ ಗ್ರಾಮೀಣ ಪ್ರದೇಶಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಬೇಕು ಎಂಬುವುವು ಸೇರಿದಂತೆ ವಿವಿಧ ಅಂಶಗಳುಳ್ಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
