
ಬೆಂಗಳೂರು:ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸರಣಿ ಸಭೆಗಳನ್ನು ನಡೆಸಲು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಂದಾಗಿದ್ದಾರೆ.ತಾವು ಅಧ್ಯಕ್ಷರಾದ ದಿನದಿಂದಲೂ ಲೋಕಸಭೆ ಚುನಾವಣೆ ತಯಾರಿಗೆ ಕಸರತ್ತು ನಡೆಸಿದ್ದರಿಂದಲೇ ಇಂದು ರಾಜ್ಯದಲ್ಲಿ ಸಮಾಧಾನಕರ ಲಿತಾಂಶ ಪಡೆದುಕೊಳ್ಳಲು ಸಾಧ್ಯವಾಗಿದೆ. ಇಲ್ಲದೆ ಹೋಗಿದ್ದರೆ, ಕಾಂಗ್ರೆಸ್‌ನ ಗ್ಯಾರಂಟಿ ಅಲೆಯಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಪಡೆದುಕೊಳ್ಳುವುದು ಕಷ್ಟವಿತ್ತು ಎನ್ನುವ ವಾಸ್ತವವನ್ನು ಅರಿತಿರುವ ವಿಜಯೇಂದ್ರ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.ಪ್ರತಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿಯೂ ಪ್ರವಾಸ ಮಾಡಿ ಸಭೆಗಳನ್ನು ನಡೆಸುವ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು. ಮುಖಂಡರುಗಳ ನಡುವೆ ಏನೇ ಭಿನ್ನಾಭಿಪ್ರಾಯಗಳಿದ್ದರೂ, ಅದನ್ನು ಸ್ಥಳೀಯವಾಗಿಯೇ ಬಗೆಹರಿಸಬೇಕು. ಆ ನಿಟ್ಟಿನಲ್ಲಿ ಸರಣಿ ಸಭೆಗಳು ಅನಿವಾರ್ಯ ಎನ್ನುವುದು ಪಕ್ಷದ ಹಿರಿಯರ ಅಭಿಮತವಾಗಿದ್ದು, ಅದಕ್ಕೆ ವಿಜಯೇಂದ್ರ ಅವರು ಸಹಮತ ವ್ಯಕ್ತಪಡಿಸಿದ್ದಾರೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಗೆ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷವನ್ನು ಕಟ್ಟಲು ಶ್ರಮಿಸಿದರೋ ಅದೇ ಹಾದಿಯಲ್ಲಿ ನೀವು ಮುನ್ನೆಡೆಯಬೇಕು. ಬೆಂಗಳೂರಿನಲ್ಲಿ ಕುಳಿತು ಸಭೆ ನಡೆಸಿದರೆ ಏನೂ ಪ್ರಯೋಜನವಾಗುವುದಿಲ್ಲ. ಆದ್ದರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎನ್ನುವ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿಜಯೇಂದ್ರ ಅವರು ವಿಭಾಗವಾರು ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
