ಭೂಪಾಲ್: ಮಧ್ಯೆಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವಿಭಾಗದಲ್ಲಿ ವ್ಯವಸ್ಥಾಪಕನಾಗಿ ಸೇವೆ ಸಲ್ಲಿಸುತ್ತಿದ್ದಾಗ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಬ್ರಜ್‌ ಮೋಹನ್‌ ಗುಪ್ತಾ ಎಂಬಾತನಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 5000 ದಂಡ ವಿಧಿಸಿ, ಅಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಕೆಲಸ ಮಾಡುತ್ತಿದ್ದಾಗ 16-5-2014ರಲ್ಲಿ ಕಂಪ್ಯೂಟರ್‌ ಅಪರೇಟರ್‌ ಅವರ ಬಳಿ 4000 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ನಿಮ್ಮ ಕೆಲಸವನ್ನು ಮುಂದುವರೆಸಲಾಗುವುದು ಮತ್ತು ಕೆಲಸದಿಂದ ತೆಗೆದುಹಾಕುವುದಿಲ್ಲ ಎಂದು ಹೇಳಿದ್ದ. ಈತ ಲಂಚ ಸ್ವೀಕರಿಸುವ ವೇಳೆ ದೂರುದಾರರು ನೀಡಿರುವ ಮಾಹಿತಿ ಅನುಸಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಆರೋಪಿ ಗುಪ್ತಾನನ್ನು ಬಂಧಿಸಿ, ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿ, ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧವೆಸಗಿದ್ದು ಸಾಬೀತಾಗಿದೆ. ಅದಕ್ಕಾಗಿ ಆರೋಪಿ ಶಿಕ್ಷೆಗೆ ಅರ್ಹನಾಗಿದ್ದಾನೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
