ನವದೆಹಲಿ:ಆಗಸ್ಟ್ ತಿಂಗಳಲ್ಲಿ 1.12 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ. ಇದರಲ್ಲಿ 20, 522 ಕೋಟಿ ರೂ. ಸಿಜಿಎಸ್​ಟಿ, 26,605 ಎಸ್​ಗಿಎಸ್​ಟಿ, 56,247 ಐಜಿಎಸ್​ಟಿ ಸೇರಿದೆ.
ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ತೆರಿಗೆ ಸಂಗ್ರಹ ಶೇ. 30 ಏರಿಕೆ ಕಂಡಿದೆ. ದೇಶೀಯ ಒಟ್ಟಾರೆ ವಹಿವಾಟಿನಲ್ಲೂ ಶೇ. 27 ಏರಿಕೆ ಕಂಡುಬಂದಿದೆ. ಕಳೆದ 9 ತಿಂಗಳಿಂದ ಜಿಎಸ್​ಟಿ ಸಂಗ್ರಹ 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗುತ್ತಿದೆ. ಕರೊನಾ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹ ಮಾಸಿಕ 1 ಲಕ್ಷ ರೂ.ಗಿಂತ ಕೆಳಕ್ಕೆ ಕುಸಿದಿತ್ತು. ಬಳಿಕ ನಿರ್ಬಂಧ ತೆರವುಗೊಳಿಸಿದ ಬಳಿಕ ಏರಿಕೆ ಕಂಡಿತ್ತು. ಆರ್ಥಿಕ ಚೇತರಿಕೆ, ವಂಚನೆ ಪ್ರಕರಣಗಳಿಗೆ ಕಡಿವಾಣ, ನಕಲಿ ಬಿಲ್​ಗಳ ನಿಯಂತ್ರಣ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹ ಏರಿಕೆ ಕಾಣುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಶೇ. 35 ಏರಿಕೆ: ಕರ್ನಾಟಕದಲ್ಲಿ 7429 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದ್ದು, ಶೇ. 35 ಏರಿಕೆ ಕಂಡಿದೆ. ಕಳೆದ ವರ್ಷದ ಆಗಸ್ಟ್​ನಲ್ಲಿ 5502 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 15,175 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:18 − 2 =
Remember me
