ನವದೆಹಲಿ:ಕಳೆದ 10 ವರ್ಷಗಳಲ್ಲಿ ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಬಿಜೆಪಿ ಒಂದೂವರೆ ಪಟ್ಟು ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಉದ್ಯೋಗ ಮೇಳದಡಿ ಇತ್ತೀಚೆಗೆ ನೇಮಕಗೊಂಡ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ೇಮಕಾತಿ ಪತ್ರ ವಿತರಿಸಿದ ಬಳಿಕ ವಿಡಿಯೊ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ, ಪ್ರಸ್ತುತ ಯುವಕರಿಗೆ ಉದ್ಯೋಗ ನೀಡುವ ಹಕ್ಕು ನಿರಂತರವಾಗಿ ವೇಗವಾಗಿ ಪ್ರಗತಿಯಲ್ಲಿದೆ. ಹಿಂದಿನ ಸರ್ಕಾರಗಳಲ್ಲಿ ಉದ್ಯೋಗ ಜಾಹೀರಾತಿನಿಂದ ಹಿಡಿದು ನೇಮಕಾತಿ ಪತ್ರ ನೀಡುವವರೆಗೆ ಬಹಳ ಸಮಯ ತೆಗೆದುಕೊಳ್ಳುತ್ತಿತ್ತು. ಈ ವಿಳಂಬದ ಲಾಭ ಪಡೆದು ಆ ಕಾಲದಲ್ಲಿ ಲಂಚವೂ ಜೋರಾಗಿತ್ತು. ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕಗೊಳಿಸಿದೆ ಎಂದರು. ನಿಗದಿತ ಅವಧಿಯೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸ ಬೇಕು ಎಂಬುದಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ಯುವಕರೆಲ್ಲರೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಸಮಾನ ಅವಕಾಶವಿದೆ ಎಂದು ನಂಬಿದ್ದಾರೆ. ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ಸರ್ಕಾರಿ ವ್ಯವಸ್ಥೆಯಲ್ಲಿ ಉದ್ಯೋಗ ಪಡೆಯಬಹುದು ಎಂದು ಅವರು ಹೇಳಿದರು. ಒಂದು ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರವಿದ್ಯುತ್ ಯೋಜನೆ ಮತ್ತು ಗಣನೀಯ ಮೂಲಸೌಕರ್ಯ ಹೂಡಿಕೆಯಂತಹ ಸರ್ಕಾರ ಕೈಗೊಂಡ ಕ್ರಮಗಳು ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ ಎಂದೂ ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ದೆಹಲಿಯಲ್ಲಿ ಸಮಗ್ರ ಕರ್ಮಯೋಗಿ ಭವನ ಸಂಕೀರ್ಣದ ಮೊದಲ ಹಂತದ ಶಂಕುಸ್ಥಾಪನೆ ಮಾಡಿದರು. ಮಿಷನ್ ಕರ್ಮಯೋಗಿಯ ವಿವಿಧ ಶಾಖೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ಉತ್ತೇಜಿಸುವುದು ಈ ಸಂಕೀರ್ಣದ ಉದ್ದೇಶವಾಗಿದೆ.
1.25 ಲಕ್ಷ ಸ್ಟಾರ್ಟಪ್ಸ್:ಇಂದು ಭಾರತ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯಾಗಿದೆ. ದೇಶದಲ್ಲಿ ಈಗ ಸ್ಟಾರ್ಟಪ್​ಗಳ ಸಂಖ್ಯೆ 1.25 ಲಕ್ಷಕ್ಕೆ ತಲುಪುತ್ತಿದೆ. ಆ ಪೈಕಿ ಹೆಚ್ಚಿನವು ಶ್ರೇಣಿ 2-3ರ ನಗರಗಳಲ್ಲಿವೆ. ಈ ಸ್ಟಾರ್ಟಪ್​ಗಳ ಮೂಲಕ ಯುವಕರಿಗೆ ಲಕ್ಷಗಟ್ಟಲೆ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಸ್ಟಾರ್ಟಪ್​ಗಳಿಗೆ ನೀಡಿರುವ ತೆರಿಗೆ ವಿನಾಯಿತಿ ವಿಸ್ತರಿಸುವುದಾಗಿ ಈ ಬಾರಿಯ ಬಜೆಟ್​ನಲ್ಲಿ ಘೊಷಿಸಲಾಗಿದೆ ಎಂದು ಪ್ರಧಾನಿ ಹೇಳಿದರು.
ಸಂಪರ್ಕದಿಂದ ಉತ್ತಮ ಅಭಿವೃದ್ಧಿ:ದೇಶದಲ್ಲಿ ಸಂಪರ್ಕ ವಿಸ್ತರಿಸಿದಾಗ ಅದು ಏಕಕಾಲದಲ್ಲಿ ಅನೇಕ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ. ಸುಧಾರಿತ ಸಂಪರ್ಕದೊಂದಿಗೆ ಹೊಸ ಮಾರುಕಟ್ಟೆಗಳು ರೂಪುಗೊಳ್ಳಲು ಪ್ರಾರಂಭಿಸುತ್ತವೆ ಮತ್ತು ಪ್ರವಾಸಿ ಸ್ಥಳಗಳು ಅಭಿವೃದ್ಧಿಗೊಳ್ಳುತ್ತವೆ. ಹೊಸ ಉದ್ಯಮಗಳು ಮತ್ತು ಲಕ್ಷಾಂತರ ಉದ್ಯೋಗಾವಕಾಶಗಳ ಸೃಷ್ಟಿ ಆಗುತ್ತದೆ. ಅಂದರೆ ಉತ್ತಮ ಸಂಪರ್ಕವು ದೇಶದ ಅಭಿವೃದ್ಧಿ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
