ಶ್ರೀನಗರ:ಇಲ್ಲಿನ ಹೊರವಲಯದ ಲಾವಯ್​ಪೋರಾದಲ್ಲಿ ಉಗ್ರರು ಹಾಗೂ ರಕ್ಷಣಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಓರ್ವ ಸಿಆರ್​ಪಿಎಫ್​ ಯೋಧ ಹುತಾತ್ಮರಾಗಿದ್ದು ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.
ಆ ಪ್ರದೇಶವನ್ನು ಪೊಲೀಸ್​ ಹಾಗೂ ಸೇನಾ ಸಿಬ್ಬಂದಿ ಸಂಪೂರ್ಣ ಸುತ್ತುವರಿದಿದ್ದಾರೆ. ಇನ್ನೋರ್ವ ಉಗ್ರನನ್ನು ಬಂಧಿಸಲಾಗಿದೆ.
ಉಗ್ರರು ದ್ವಿಚಕ್ರವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪ್ರಯಾಣ ಮಾಡುತ್ತಿದ್ದರು. ಅವರನ್ನು ಪೊಲೀಸರು ಹಾಗೂ ಸಿಆರ್​ಪಿಎಫ್​ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ತಡೆದಿದ್ದಾರೆ. ಆಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಸಿಆರ್​ಪಿಎಫ್​ನ ಯೋಧ ಮೃತಪಟ್ಟಿದ್ದಾರೆ. ಪ್ರತಿ ದಾಳಿ ನಡೆಸಿದ ರಕ್ಷಣಾ ಸಿಬ್ಬಂದಿಯ ಗುಂಡಿಗೆ ಇಬ್ಬರು ಉಗ್ರರು ಸತ್ತಿದ್ದಾರೆ. ಇನ್ನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಯಿಂದಾಗಿ ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಇನ್ನೂ ಹೆಚ್ಚಿನ ಉಗ್ರರು ಸ್ಥಳದಲ್ಲಿ ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಅವರನ್ನು ಹುಡುಕಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್​ನಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಶ್ರೀನಗರದಲ್ಲಿ ನಡೆದ ಮೊದಲ ಎನ್​ಕೌಂಟರ್ ಇದಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − two =
Remember me
