ಲಖನೌ:ಯುವತಿಯೊಂದಿಗೆ ಸ್ನೇಹ ಬೆಳೆಸಲು ಗುರುತು ಮರೆಮಾಚಿ ಆಕೆಯನ್ನು ಮತಂತಾರ ಮಾಡಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
24 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಅಬಿದ್​ ಈ ಮೊದಲು ಅಂಕಿತ್​ ಎಂದು ಪರಿಚಯಿಸಿಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ಅಬಿದ್​ ಎಂಬ ವ್ಯಕ್ತಿಯೂ ತನ್ನನ್ನು ತಾನು ದೂರುದಾರ ಯುವತಿ ಬಳಿ ಅಂಕಿತ್​ ಎಂದು ಪರಿಚಯಿಸಿಕೊಂಡು ಸ್ನೇಹ ಬೆಳೆಸಿದ್ದಾನೆ. ದಿನಕಳೆದಂತೆ ಆಕೆಯ ವಿಶ್ವಾಸ ಗಳಿಸಿದ ಆರೋಪಿಯೂ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.
ಕೆಲ ದಿನಗಳ ಬಳಿಕ ಆರೋಪಿಯೂ ತನ್ನೊಂದಿಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋವನ್ನು ಇಂಟರ್​ನೆಟ್​ನಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಸಿ ಯುವತಿಯನ್ನು ವಿವಾಹವಾಗಿದ್ದಾನೆ. ಮದುವೆಯಾದ ಬಳಿಕ ಅಬಿದ್​ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿಸಿ ಮಾಂಸಹಾರವನ್ನು ತಿನ್ನಿಸಿದ್ದಾನೆ. ಬಳಿಕ ಆತನ ತಂದೆಯ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಆಕೆಗೆ ಪೀಡಿಸಿದ್ಧಾನೆ.
ಇದನ್ನೂ ಓದಿ:ಸಬ್ ಇನ್ಸ್​ಪೆಕ್ಟರ್​ ಪತ್ನಿ ಅನುಮಾನ್ಪದವಾಗಿ ಸಾವು; ಪ್ರಕರಣದ ಸುತ್ತ ಅನುಮಾನದ ಹುತ್ತ
ಇದಕ್ಕೊಪ್ಪದಿದ್ದಾಗ ಆಕೆಯನ್ನು ಅಬಿದ್​ ಕುಟುಂಬಸ್ಥರು ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ದುರುದಾರ ಯುವತಿ ಅಲ್ಲಿದ್ದವರ ಕಣ್ಣು ತಪ್ಪಿಸಿ ಪೊಲೀಸ್​ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.
ಮಹಿಳೆ ನೀಡಿರುವ ಹೇಳಿಕೆ ಆಧಾರದ ಮೇಲೆ ಆರೋಪಿಗಳ ವಿರುದ್ಧ ಉತ್ತರಪ್ರದೇಶ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಡು ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್​ ಭಾಟಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
