ನವದೆಹಲಿ:ವಸತಿ ಸಮುಚ್ಛಯ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 83 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ನಗರದಲ್ಲಿ ನಡೆದಿದೆ.
ದ್ವಾರಕಾ ನಗರದ ಸೆಕ್ಟರ್​ 10ರಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣ ಉಳಿಸಿಕೊಳ್ಳಲು ಇಬ್ಬರು ಮಹಿಳೆಯರು 4 ಮತ್ತು 5ನೇ ಮಹಡಿಯಿಂದ ಜಿಗಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ 5ನೇ ಮಹಡಿಗೂ ವ್ಯಾಪಿಸಿದೆ. ಪ್ರಾಣ ಉಳಿಸಿಕೊಳ್ಳಲು ಇಬ್ಬರು ಮಹಿಳೆಯರು ಜಿಗಿದಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
#UPDATE| Dwarka, Delhi | Two women had jumped from 4th and 5th floors respectively and rushed to the hospital. One of them declared brought dead.https://t.co/TlOQrTcKu9
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
