ಅಕೋಲಾ:ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ಜಗಳವು ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದ್ದು, ಒಬ್ಬ ಮೃತಪಟ್ಟು ಸುಮಾರು 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.
ಇದನ್ನೂ ಓದಿ: ರಾಜಕೀಯ ನಿವೃತ್ತಿ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆ
ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ್ದು, ನಗರದ ಕೆಲವು ಭಾಗಗಳಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಹಾಗೂ ಜನರನ್ನು ಗುಂಪು ಗುಂಪಾಗಿ ಅಲೆದಾಡುವುದನ್ನುನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲು ಹಳೇ ನಗರದ ಹರಹರಪೇತ್‌ನಲ್ಲಿ ಸಣ್ಣ ವಿವಾದಕ್ಕೆ ಎರಡು ಗುಂಪುಗಳ ವಾಗ್ವಾದ ನಡೆದು ಘರ್ಷಣೆ ನಡೆದಿದೆ. ತರುವಾಯ, ಈ ಪ್ರದೇಶದಲ್ಲಿ ಹಲವಾರು ಜನರು ಜಮಾಯಿಸಿ ಕಲ್ಲು ತೂರಾಟ ನಡೆಸಿ ಹಲವಾರು ಕಾರು ಮತ್ತು ಬೈಕ್​ಗಳಿಗೆ ಬೆಂಕಿ ಹಚ್ಚಲಾಯಿತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಸ್ಥಳದಲ್ಲಿನ ಉದ್ವಿಗ್ನತೆ ಹಾಗೂ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − twelve =
Remember me
