ರಾಯ್‌ಪುರ:ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಶನಿವಾರ) ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಬೆಮೆಟಾರಾ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿ:ಗುಜರಾತ್​: ರಾಜ್‌ಕೋಟ್‌ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ, ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಘಟನೆಯ ನಂತರ ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದವು.ಸದ್ಯಕ್ಕೆ ಈ ಘಟಕದ ನೌಕರರನ್ನು ಸ್ಥಳಾಂತರಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗ್ನಿಶಾಮಕ ದಳದ ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ.
ಗಾಯಾಳುಗಳನ್ನು ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ. “ಸ್ಫೋಟದಲ್ಲಿ ಗಾಯಗೊಂಡ ಆರು ಜನರನ್ನು ಚಿಕಿತ್ಸೆಗಾಗಿ ಡಾ ಬಿಆರ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ರಾಯ್ಪುರಕ್ಕೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದಾರೆ ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶುಭ್ರಾ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದಾಗ ಕನಿಷ್ಠ 100 ಮಂದಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಸ್ಥಳೀಯ ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ. ತಯಾರಿಕಾ ಕಾರ್ಖಾನೆಯಲ್ಲಿ ಹಲವಾರು ಜನರು ನಾಪತ್ತೆಯಾಗಿದ್ದಾರೆ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಭಯವಿದೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕರು ಹೋಲ್​ಸೇಲ್ ಡ್ರಗ್‌ ವ್ಯಾಪಾರಿಗಳು: ಪ್ರಧಾನಿ ಮೋದಿ ಟೀಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
