ನವದೆಹಲಿ:ಕೆಲ ದಿನಗಳ ಹಿಂದೆ ಜರುಗಿದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕೆಲ ಬಿಜೆಪಿಯ ಹಾಲಿ ಸಂಸದರು ಕೂಡ ಸ್ಪರ್ಧಾ ಕಣದಲ್ಲಿದ್ದರು. ಇದರಲ್ಲಿ ಗೆದ್ದು ಶಾಸಕರಾಗಿರುವ 10 ಮಂದಿ ಈಗ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆಯ ಸ್ಪೀಕರ್‌ಗೆ ಅವರು ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ 12 ಮಂದಿ ಸಂಸದರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ 10 ಮಂದಿ ಸಂಸದರ ನಿಯೋಗವು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿತು.
ಸ್ಪೀಕರ್ ಅವರನ್ನು ಭೇಟಿ ಮಾಡಿದವರಲ್ಲಿ ಮಧ್ಯಪ್ರದೇಶದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ಸೇರಿದ್ದಾರೆ. ರಾಜಸ್ಥಾನದಿಂದ, ರಾಜೀನಾಮೆ ಸಲ್ಲಿಸಿದ ಸಂಸದರಲ್ಲಿ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಸೇರಿದ್ದಾರೆ, ಅರುಣ್ ಸಾವೊ ಮತ್ತು ಗೋಮತಿ ಸಾಯಿ ಛತ್ತೀಸ್‌ಗಢದ ಸಂಸದರಾಗಿದ್ದರು.
ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯು ಬಹುಮತದ ಗಡಿ ದಾಟಿ ಕಾಂಗ್ರೆಸ್ ಅನ್ನು ಸೋಲಿಸುವ ಮೂಲಕ ಸರ್ಕಾರ ರಚಿಸಲು ಸಿದ್ಧವಾಗಿದೆ.
ಕೆ. ಚಂದ್ರಶೇಖರ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಗೆ ಮಾರಣಾಂತಿಕ ಹೊಡೆತ ನೀಡಿದ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್​ ಪಕ್ಷವು ವಿಜಯಶಾಲಿಯಾಗಿ ಹೊರಹೊಮ್ಮಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಈ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಸೆಮಿಫೈನಲ್ ಎಂದೇ ಬಿಂಬಿಸಲಾಗಿದ್ದು, ಕೇಸರಿ ಪಕ್ಷ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
