ಅಹಮದ್​ನಗರ:ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮವಾಗಿ 10 ಜನ ಕರೊನಾ ರೋಗಿಗಳು ಸಾವಪ್ಪಿರುವ ಘಟನೆ ಇಂದು ನಡೆದಿದೆ. ಅಹಮದ್​​ನಗರ್​ ಜಿಲ್ಲಾಸ್ಪತ್ರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಉಂಟಾಯಿತು. ಐಸಿಯುನಲ್ಲಿ ಅಡ್ಮಿಟ್​ ಆಗಿದ್ದ 25 ಜನ ರೋಗಿಗಳಲ್ಲಿ ಇನ್ನೂ ಆರು ಜನರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಯ ವೇಳೆಗೆ ಬೆಂಕಿ ಹತ್ತಿಕೊಂಡಿತು ಎಂದು ಅಹಮದ್​​ನಗರ ಮುನಿಸಿಪಾಲಿಟಿಯ ಅಧಿಕಾರಿ ಶಂಕರ್​ ಮಿಸಲ್​​ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ 10 ಕರೊನಾ ಸೋಂಕಿತರು ಸಾವಪ್ಪಿದ್ದಾರೆ ಎಂದು ಡಿಸಿ ರಾಜೇಂದ್ರ ಭೋಸ್ಲೆ ತಿಳಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್​ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಈ ಅಗ್ನಿ ದುರಂತದ ಬಗ್ಗೆ ಆಳವಾದ ತನಿಖೆ ನಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.(ಏಜೆನ್ಸೀಸ್)
ಥಿಯೇಟರ್​​ನ ಗೋಡೆಯೊಳಗೆ ಸಿಕ್ಕಿಕೊಂಡಿದ್ದ ಬೆತ್ತಲೆ ಮನುಷ್ಯ!

ರಾಜ್ಯದಲ್ಲಿ ತಗ್ಗಿದ ಕರೊನಾ: 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
