ನವದೆಹಲಿ:ಈಶಾನ್ಯ ದೆಹಲಿ ಹಿಂಸಾಚಾರ ಹಿನ್ನೆಲೆಯಲ್ಲಿ ಮೌಜಾಪುರ, ಜಫ್ರಾಬಾದ್​, ಚಾಂದ್​ಬಾಘ್​ ಮತ್ತು ಕರ್ವಾಲ್​ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಅಲ್ಲದೆ ಈಶಾನ್ಯ ದೆಹಲಿ ಭಾಗದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್​ನ್ನು ಮಾರ್ಚ್​ 24ರವರೆಗೆ ವಿಸ್ತರಿಸಲಾಗಿದೆ.
ಪೌರತ್ವ ತಿದ್ದಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಸಂಬಂಧ ಇಂದು ಗೃಹ ಸಚಿಹ ಅಮಿತ್​ ಷಾ ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಮತ್ತು ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಲ್​ ಅವರೊಂದಿಗೆ ಸಭೆ ನಡೆಯಿತು.
ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಗುಂಪಿನ ನಡುವೆ ಉಂಟಾಗಿರುವ ಗಲಾಟೆಯು ಹಿಂಸಾಚಾರಕ್ಕೆ ತಿರುಗಿರುವ ಪರಿಣಾಮ ಪೊಲೀಸ್​ ಸಿಬ್ಬಂದಿ ಸೇರಿ ಸಾವಿಗೀಡಾಗಿದವರ ಸಂಖ್ಯೆ 10ಕ್ಕೇರಿದೆ.
ಗಲಭೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅದರಲ್ಲೂ ಸುಮಾರು 70 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಹಲವು ಭಾಗಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಅಂಗಡಿಗಳು ಭಸ್ಮವಾಗಿದ್ದು, ಈಶಾನ್ಯ ದೆಹಲಿಯ ಭಜನ್​ಪುರ, ಚಾಂದ್​​ ಬಾಘ್​ ಮತ್ತು ಕರ್ವಾಲ್​ ನಗರಗಳಲ್ಲಿ ಹಿಂಸಾಚಾರ ಹೆಚ್ಚಾಗಿತ್ತು.
ನಿನ್ನೆಯಷ್ಟೇ ಉಲ್ಬಣಗೊಂಡ ಹಿಂಸಾಚಾರಕ್ಕೆ ಈವರೆಗೂ 10 ಮಂದಿ ಬಲಿಯಾಗಿದ್ದು,ಗೃಹ ಸಚಿವಾಲಯ ಸೇನಾ ಪಡೆಗಳನ್ನು ನಿಯೋಜಿಸಿದೆ.
ಗಾಯಗೊಂಡ 130 ಮಂದಿಯಲ್ಲಿ 56 ಪೊಲೀಸ್​ ಸಿಬ್ಬಂದಿಯಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಂಸಾಚಾರದಲ್ಲಿ ಮೃತಪಟ್ಟ ಪೊಲೀಸ್​ ಸಿಬ್ಬಂದಿ ಮತ್ತು ಇತರರಿಗೆ ಸಿಎಂ ಕೇಜ್ರಿವಾಲ್​ ಸಂತಾಪ ಸೂಚಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
