ಮುಂಬೈ:ಎರಡು ಪ್ರತ್ಯೆಕ ಅಪಘಾತ ಪ್ರಕರಣಗಳಲ್ಲಿ 10 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್​ನಗರ ಹಾಗೂ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮುಂಬೈನಿಂಡ ಬೀಡ್​ನತ್ತ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್​ ಒಂದು ಗುರುವಾರ ಬೆಳಗಿನ ಜಾವ 6 ಘಂಟೆ ಸುಮಾರಿಗೆ ಅಷ್ಟಾ ಫಟಾ ಬಳಿ ವಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಬಸ್ಸಿನಲ್ಲಿ 40-45 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಧೋಂಡಿಬಾ ಶಿಂಧೆ, ದಿಯೋದತ್ ಪೇಚೆ, ಮೊಹಮ್ಮದ್ ಆಸಿಫ್, ದೋಸ್ತ್ ಮೊಹಮ್ಮದ್ ಖಾನ್, ಅಶೋಕ್ ಭೋಂಡ್ವೆ ಮತ್ತು ರವಿ ಗೊಡಂಬೆ ಎಂದು ಗುರುತಿಸಲಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತಗೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Ten people have died in two different accidents in Maharashtra's Beed district.Four people, including a doctor, died in a collision between an ambulance and a truck on its way from Dhamangaon village to the city.In the second incident, six people died after a…pic.twitter.com/DRZOmvv9EN
ಇದನ್ನೂ ಓದಿ:ವಿದೇಶಿ ವಿನಿಮಯ ಉಲ್ಲಂಘನೆ; ವಿಚಾರಣೆಗೆ ಹಾಜರಾಗುವಂತೆ ರಾಜಸ್ಥಾನ ಸಿಎಂ ಪುತ್ರನಿಗೆ ED ನೋಟಿಸ್
ನಿಂತಿದ್ದ ಲಾರಿಗೆ ಅಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ವೈದ್ಯ ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರ ಜಿಲ್ಲೆಯಲ್ಲಿ ನಡೆದಿದೆ. ಅಪಘಾತಕ್ಕೀಢಾದ ಅಂಬುಲೆನ್ಸ್​ ಅಹ್ಮದ್‌ನಗರ ಕಡೆಗೆ ಹೋಗುತ್ತಿತ್ತು. ಚಾಲಕ ಮತ್ತು ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಮೃತರನ್ನು ಡಾ.ರಾಜೇಶ್ ಜಿಂಜುರ್ಕೆ (35), ಅಂಬ್ಯುಲೆನ್ಸ್ ಚಾಲಕ ಭರತ್ ಲೋಖಂಡೆ (35), ಪಪ್ಪು ತಿರ್ಖುಂಡೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮೃತದೇಹಗಳನ್ನು ಮರಣೊತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
