ನಾಶಿಕ್​:ಶಿರಡಿ ಸಾಯಿಬಾಬ ಭಕ್ತರಿದ್ದ ಖಾಸಗಿ ಐಷಾರಾಮಿ ಬಸ್​ ಮತ್ತು ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 10 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ನಾಶಿಕ್​ ಜಿಲ್ಲೆಯ ಪಥರ್ಡೆ ಸಮೀಪ ಶುಕ್ರವಾರ ನಡೆದಿದೆ.
ಅಪಘಾತವು ಬೆಳಗಿನ ಜಾವ 7 ಗಂಟೆ ಸಮಯದಲ್ಲಿ ಸಂಭವಿಸಿದೆ. ಲಕ್ಷುರಿ ಬಸ್ ಥಾಣೆಯ ಅಂಬರ್ನಾಥ್​ನಿಂದ ಅಹ್ಮದ್​ನಗರದ ಶಿರಡಿಗೆ ತೆರಳುತ್ತಿತ್ತು. ಪಥರ್ಡೆ ಸಮೀಪ ಟ್ರಕ್​ ಮತ್ತು ಬಸ್​ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ದುರ್ಘಟನೆ ನಡೆದಿದೆ. ಸ್ಥಳದಲ್ಲೇ 10 ಮಂದಿ ಮೃತಪಟ್ಟರೆ, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಮೃತಪಟ್ಟವರಲ್ಲಿ 6 ಮಂದಿ ಮಹಿಳೆಯರು, ಓರ್ವ ಪುರುಷ ಹಾಗೂ ಉಳಿದವರು ಮಕ್ಕಳೆಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸಿನ್ನಾರ್ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಪುಣೆಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ದುರಂತದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ತನಿಖೆಗೆ ಶಿಂಧೆ ಆದೇಶಿಸಿದ್ದಾರೆ.(ಏಜೆನ್ಸೀಸ್​)
ಅಳಿವಿನಂಚಿನಲ್ಲಿರುವ ಪ್ಯಾಂಗೊಲಿನ್​ನ ಚಿಪ್ಪನ್ನು ಸಾಗಿಸುತ್ತಿದ್ದವನ ಬಂಧನ…

ಕೇವಲ 12 ದಿನದಲ್ಲಿ 5.4 ಸೆಂ.ಮೀ ಕುಸಿದ ಜೋಶಿಮಠ: ಉಪಗ್ರಹ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ಗಡಿ ಭಾಗದ ಗಾಂಜಾ ಗ್ಯಾಂಗ್​ಗಳಿಗೆ ನಿದ್ದೆ ಇಲ್ಲ! ಕೈಚಳಕ ತೋರಿಸಿದ ಬೀದರ್​ ಪೊಲೀಸರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
