ಅಮರಾವತಿ:ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದ ಜಿಲೆಟಿನ್ ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ 10 ಜನ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಕಲಸಪಾಡು ತಾಲೂಕಿನ ಮಾಮಿಲಿಪಲ್ಲಿ ಎಂಬ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತರೆಲ್ಲರೂ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ಗಣಿ ಕಾರ್ಮಿಕರಾಗಿದ್ದರು ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಸಂಭವವಿದ್ದು, ಘಟನೆಯಲ್ಲಿ ಇನ್ನೂ 12 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾನೈಟ್​ಗಾಗಿ ಸ್ಪೋಟಿಸಲು ಜಿಲೆಟಿನ್ ಕಡ್ಡಿಗಳನ್ನು ಸ್ಥಳದಲ್ಲಿ ಸಂಗ್ರಹಿಸಡಲಾಗಿತ್ತು. ಬೆಳಿಗ್ಗೆ ಕೆಲಸ ಪ್ರಾರಂಭಿಸುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಪತಿ ಶಾಸಕ, ಪತ್ನಿ ಅದೇ ಕ್ಷೇತ್ರದ ತಹಸೀಲ್ದಾರ್!

ಕರೊನಾ ನಿಯಂತ್ರಣಕ್ಕೆ ಗೋಮೂತ್ರ ಸೇವಿಸಲು ಕರೆ ಕೊಟ್ಟ ಬಿಜೆಪಿ ಶಾಸಕ: ಕುಡಿಯುವ ಕ್ರಮ ಹೀಗಿರಬೇಕಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
