ಶಿಮ್ಲಾ:ಹಿಮಾಚಲ ಪ್ರದೇಶದಲ್ಲಿ ಕೋವಿಡ್​ 19 ಸೋಂಕಿನ ಕುರಿತು ಇದುವರೆಗೆ 70 ಲಕ್ಷ ಜನರನ್ನು ಪರೀಕ್ಷಿಸಲಾಗಿದೆ. ಇವರ ಪೈಕಿ ಯಾರಲ್ಲೂ ಕೋವಿಡ್​ ಲಕ್ಷಣಗಳು ಪತ್ತೆಯಾಗಿಲ್ಲ. ಆದರೆ ಇನ್​ಫ್ಲೋಯೆನ್ಜಾ ರೀತಿಯ ಜ್ವರದಿಂದ ಬಳಲುತ್ತಿರುವ 10 ಸಾವಿರ ಜನ ಪತ್ತೆಯಾಗಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಹಿಮಾಚಲಪ್ರದೇಶ ಸಿಎಂ ಜೈರಾಮ್​ ಠಾಕೂರ್​ ಈ ವಿಷಯ ತಿಳಿಸಿದ್ದಾರೆ. ಈ ಪೈಕಿ 700 ಜನರನ್ನು ಹೆಚ್ಚುವರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಉಳಿದವರ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದರು.
ಕೋವಿಡ್​ ಲಾಕ್​ಡೌನ್​ನಿಂದಾಗಿ ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಹಿಮಾಚಲಪ್ರದೇಶ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಅವರೊಂದಿಗೆ ನಿರಂತರ ಸಂಪರ್ಕ ಹೊಂದಲಾಗಿದೆ. ಅವರೆಲ್ಲರನ್ನೂ ಚೆನ್ನಾಗಿ ನೋಡಿಕೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಕೋವಿಡ್​ ಪರಿಸ್ಥಿತಿ ತಿಳಿಗೊಳ್ಳುವವರೆಗೆ ಎಲ್ಲಿ ಇರುವರೋ ಅಲ್ಲಿಯೇ ಇದ್ದು, ಬಳಿಕ ರಾಜ್ಯಕ್ಕೆ ಮರಳುವಂತೆ ಅವರೆಲ್ಲರಿಗೂ ತಿಳಿಸಿರುವುದಾಗಿ ಹೇಳಿದರು.
ಲಾಕ್​ಡೌನ್​ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ನಡೆದು ಹೊರಟ ನಾಲ್ವರು, ಆದರೆ ಗಮ್ಯ ತಲುಪಿದ್ದು ಇಬ್ಬರು ಮಾತ್ರ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 9 =
Remember me
