ಥಾಣೆ:ರೇವ್ ಪಾರ್ಟಿಯ ಮೇಲೆ ಏಕಾಏಕಿ ದಾಳಿ ನಡೆಸಿದ ಪೊಲೀಸರು, ಡ್ರಗ್ಸ್ ಸೇವಿಸಿದ ಶಂಕೆಯ ಮೇಲೆ ಸುಮಾರು 100 ಜನರನ್ನು ಬಂಧಿಸಿದ್ದು,  ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:3.55 ಕೋಟಿ ರೂ.ವಸ್ತು ರಿಕವರಿ…ಬರೋಬ್ಬರಿ 223 ಪ್ರಕರಣ ಭೇದಿಸಿದ ಪೊಲೀಸರು
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಈ ದಾಳಿ ನಡೆಸಲಾಗಿದೆ. ಬಂಧಿತರಲ್ಲಿ ಪಾರ್ಟಿಯನ್ನು ಸಂಘಟಿಸಿದ ಇಬ್ಬರು ಕೂಡ ಸೇರಿದ್ದಾರೆ. ಥಾಣೆ ಪೊಲೀಸ್‌ನ ಕ್ರೈಂ ಬ್ರಾಂಚ್ ಘಟಕವು ತಡರಾತ್ರಿಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದು, ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಆರಂಭಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ, ಅಧಿಕಾರಿಗಳು ಈವೆಂಟ್‌ನಲ್ಲಿ ಮಾದಕವಸ್ತು ಸೇವನೆಯನ್ನು ಸೂಚಿಸುವ ಎಲ್‌ಎಸ್‌ಡಿ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ವಸ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ 12ನೇ ತರಗತಿ ಪಾಸ್ ಆದ ಮುಂಬೈ ಆಟೋ ಚಾಲಕ, ಹೇಗಿದೆ ಗೊತ್ತಾ ಇವರ ದಿನಚರಿ…
ನಡೆಯುತ್ತಿರುವ ತನಿಖೆಯ ಭಾಗವಾಗಿ, ಮಾದಕವಸ್ತು ಸೇವನೆಯ ಆರೋಪಗಳನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಬಂಧಿತ ವ್ಯಕ್ತಿಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ,(ಏಜೆನ್ಸೀಸ್).
ದೇಶದ ಅತ್ಯಂತ ಜನಪ್ರಿಯ ನಾಯಕ ಯಾರು?; ಲೋಕಸಭೆ ಚುನಾವಣೆಗೂ ಮುನ್ನ ಸಮೀಕ್ಷೆ ಮೂಲಕ ಸಾರ್ವಜನಿಕರ ಅಭಿಪ್ರಾಯ ಬಹಿರಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
