77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. 10,000 ಪೊಲೀಸರು ಹಾಗೂ 1,000 ಮುಖ ಗುರುತಿಸುವಿಕೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಪು ಕೋಟೆಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ವಾಯು ರಕ್ಷಣಾ ಗನ್‌ಗಳನ್ನು ಅಳವಡಿಸುವುದು ಸೇರಿದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್‌ಗಳು, ಗಣ್ಯ SWAT ಕಮಾಂಡೋಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ಕಾರ್ಯತಂತ್ರದ ಸ್ಥಳಗಳಲ್ಲಿ ಇರಿಸಲಾಗುತ್ತದೆ. ಹರಿಯಾಣದ ನುಹ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ವ್ಯವಸ್ಥೆಗಳ ವಿವರಗಳನ್ನು ಹಂಚಿಕೊಂಡಿರುವ ಪೊಲೀಸ್ ವಿಶೇಷ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇಪೇಂದ್ರ ಪಾಠಕ್, ಈ ವರ್ಷ COVID-19 ಯಾವುದೇ ನಿರ್ಬಂಧಗಳಿಲ್ಲದೇ ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಗುವುದು. ಆದ್ದರಿಂದ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಭದ್ರತೆಯನ್ನು ಒದಗಿಸಲು ಇತರ ಏಜೆನ್ಸಿಗಳೊಂದಿಗೆ ಮಾಹಿತಿ ಸಂಯೋಜಿಸುತ್ತೇವೆ.
ದೆಹಲಿ ಪೊಲೀಸರು ಭದ್ರತಾ ಉದ್ದೇಶಗಳಿಗಾಗಿ ತಂತ್ರಜ್ಞಾನ ವ್ಯವಸ್ಥೆಯನ್ನು ಬಳಸಲಿದ್ದಾರೆ. ಭದ್ರತೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.ಸುಮಾರು 1,800 ವಿಶೇಷ ಅತಿಥಿಗಳನ್ನು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶಾದ್ಯಂತ ಸರ್ಕಾರ ಆಹ್ವಾನಿಸಿದೆ. ಈ ವರ್ಷ 20,000 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನಾಗರಿಕರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
