ನವದೆಹಲಿ:ದೇಶದಲ್ಲಿ 107 ಸಂಸದರು ಮತ್ತು ಶಾಸಕರ ವಿರುದ್ಧ ದ್ವೇಷ ಭಾಷಣ ಕೇಸ್​ಗಳು ನಡೆಯುತ್ತಿವೆ. ಇಂತಹ ಪ್ರಕರಣಗಳನ್ನು ಹೊಂದಿರುವ 480 ಅಭ್ಯರ್ಥಿಗಳು ಕಳೆದ ಐದು ವರ್ಷಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್​ ಫಾರ್​ ಡೆಮಾಕ್ರಟಿಕ್​ ರಿಫಾಮ್ಸ್​ರ್ (ಎಡಿಆರ್​) ತಿಳಿಸಿದೆ.
ಚುನಾವಣೆ ವೇಳೆ ಅಭ್ಯರ್ಥಿಗಳು ಸಲ್ಲಿಸಿದ ಪ್ರಮಾಣ ಪತ್ರಗಳನ್ನು ವಿಶ್ಲೇಷಿಸಿ ಈ ವರದಿ ಸಿದ್ಧಪಡಿಸಲಾಗಿದೆ. ಉತ್ತರ ಪ್ರದೇಶದ ಏಳು, ತಮಿಳುನಾಡಿನ ನಾಲ್ಕು, ಬಿಹಾರ, ಕರ್ನಾಟಕ ಮತ್ತು ತೆಲಂಗಾಣದ ತಲಾ ಮೂರು, ಅಸ್ಸಾಂ, ಗುಜರಾತ್​, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಇಬ್ಬರು ಮತ್ತು ಜಾರ್ಖಂಡ್​, ಮಧ್ಯಪ್ರದೇಶ, ಕೇರಳ, ಒಡಿಶಾ ಮತ್ತು ಪಂಜಾಬ್​ನ ತಲಾ ಒಬ್ಬ ಸಂಸದ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ದ್ವೇಷದ ಭಾಷಣ ಪ್ರಕರಣ ಎದುರಿಸುತ್ತಿರುವವರ ಪೈಕಿ 22 ಸಂಸದರು ಆಡಳಿತಾರೂಢ ಬಿಜೆಪಿ, ಇಬ್ಬರು ಕಾಂಗ್ರೆಸ್​ ಮತ್ತು ಎಎಪಿ, ಎಐಎಂಐಎಂ, ಎಐಯುಡಿಎಫ್​, ಡಿಎಂಕೆ, ಎಂಡಿಎಂಕೆ, ಪಿಎಂಕೆ, ಶಿವಸೇನೆ (ಎಎಪಿ)ಯಿಂದ ತಲಾ ಒಬ್ಬರು ಇದ್ದಾರೆ. 74 ಶಾಸಕರು ತಮ್ಮ ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − two =
Remember me
