ನವದೆಹಲಿ:ಪೇಂಟ್​ ತಯಾರಿಕಾ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಆಲಿಪುರದಲ್ಲಿ ನಡೆದಿದೆ.
ಘಟನೆಯು ಗುರುವಾರ ತಡೆರಾತ್ರಿ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್​ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ.  ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿದ್ದು, ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Fire Station officer Satyawan Singh says "Fire call was received at around 5 pm yesterday. There were chemical blasts taking place here. As confirmed by NDRF, 11 people have died and four others have been injured. A total of 30 fire tenders were engaged in dousing the…pic.twitter.com/CWVvlNZcVQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
