ನವಿ ಮುಂಬೈ:ಭಾನುವಾರ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಭೂಷಣ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಯಾನೆ ಅವರಿಗೆ ಮಹಾರಾಷ್ಟ್ರ ಸರ್ಕಾರ ವತಿಯಿಂದ ಭೂಷಣ್​ ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ ಪ್ರದಾನ ಮಾಡಿದ್ದರು.
ಭಾನುವಾರ ನವಿ ಮುಂಬೈನ ಖಾರ್​ಘರ್​ನಲ್ಲಿ ಸಮಾರಂಭ ನಡೆದಿದ್ದು ಈ ವೇಳೆ ತಾಪಮಾನ 38 ಡಿಗ್ರಿ ಇತ್ತು ಎಂದು ಹೇಳಲಾಗಿದೆ.
आज सकाळी ज्येष्ठ निरुपणकार आप्पासाहेब धर्माधिकारी यांना महाराष्ट्र भूषण पुरस्कार प्रदान सोहोळ्यात सहभागी काही श्रीसदस्यांचे उष्माघातामुळे मृत्यू झाल्याची घटना अतिशय दुर्दैवी आणि वेदनादायी आहे.मी या साधकांना भावपूर्ण श्रद्धांजली अर्पण करतो. त्यांच्या कुटुंबियांच्या दुःखात आम्ही…
ಇದನ್ನೂ ಓದಿ:ದೆಹಲಿ ಪಾಲಿಕೆ ಮೇಯರ್​-ಉಪಮೇಯರ್​​ ಚುನಾವಣೆ; ಅಭ್ಯರ್ಥಿಗಳನ್ನು ಘೋಷಿಸಿದ ಆಪ್​
123ಕ್ಕೂ ಹೆಚ್ಚು ಜನ ಬಿಸಿಲಿನ ತಾಪವನ್ನು ತಾಳಲಾರದೆ ಅಸ್ವಸ್ಥರಾದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಯಿತು. ಈ ಪೈಕಿ 11 ಮಂದಿ ಮೃತಪಟ್ಟಿದ್ದು ಐವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಹಾರಅಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಇದು ದುರದೃಷ್ಟಕರವಾಗಿದ್ದು ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್ ಇದು ದುರದೃಷ್ಟಕರ ಘಟನೆಯಾಗಿದ್ದು ಮೃತರ ಕುಟುಂಬಕ್ಕೆದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ​ ಸಂತ್ರಸ್ತರನ್ನು ಖುದ್ದು ಮುಖ್ಯಮಂತ್ರಿಗಳು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದು ವೈದ್ಯರಿಗೆ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
