ಲಖನೌ:ಟ್ರ್ಯಾಕ್ಟರ್​ ಟ್ರಾಲಿ ಸೇತುವೆ ಕೆಳಗೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಿನ್ನೆ (ಏಪ್ರಿಲ್​ 15) ನಡೆದಿದೆ.
ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯರ ಸಹಾಯದಿಂದ ಹತ್ತಿರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತ 11 ಮಂದಿಯಲ್ಲಿ ಇಬ್ಬರು ಮಹಿಳೆಯರು, ಓರ್ವ ವ್ಯಕ್ತಿ ಮತ್ತು 8 ಮಂದಿ ಅಪ್ರಾಪ್ತರು ಸೇರಿದ್ದಾರೆ. ಸುಮಾರು 29 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶಹಜಹಾನ್​ಪುರದ ಬಿರ್ಸಿಂಗ್​ಪುರ್​ ಗ್ರಾಮದಲ್ಲಿರುವ ಗರ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಮೇಲಿಂದ ಟ್ರ್ಯಾಕ್ಟರ್​ ಟ್ರಾಲಿ ನದಿಗೆ ಬಿದ್ದು ಅವಘಡ ಸಂಭವಿಸಿದೆ. ಪೊಲೀಸರು ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ:ಕರೊನಾಗೆ ಚೆಲ್ಲಾಟ, ವೆಂಕಿಗೆ ಪ್ರಾಣಸಂಕಟ: ವಿಜಯವಾಣಿ ಸಿನಿಮಾ ವಿಮರ್ಶೆ
जनपद शाहजहांपुर में दुर्घटना में हुई जनहानि अत्यंत दुःखद है। मेरी संवेदनाएं शोकाकुल परिजनों के साथ हैं।
प्रशासनिक अधिकारियों को युद्ध स्तर पर राहत-बचाव कार्य संचालित करने व घायलों के समुचित उपचार हेतु निर्देश दिए हैं।
प्रभु श्री राम से घायलों के शीघ्र स्वास्थ्य लाभ की कामना है।
— Yogi Adityanath (@myogiadityanath)April 15, 2023

ಉತ್ತರ ಪ್ರದೇಶd ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಆಡಳಿತಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜನರು ಗರ್ರಾ ನದಿಯಿಂದ ಭಗವತ್ ಕಥೆಗಾಗಿ ನೀರು ತರಲು ನದಿಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಶಹಜಹಾನ್‌ಪುರ ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಸುಮಾರು 40 ಕ್ಕೂ ಹೆಚ್ಚು ಜನರಿದ್ದರು ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!

ಬಾವಲಿ.. ಹಾವಳಿಯಷ್ಟೇ ಅಲ್ಲ..: ಶಕ್ತಿಶಾಲಿ ಸಸ್ತನಿಗಳ ಕೌತುಕಮಯ ಜೀವನದತ್ತ ಒಂದು ಇಣುಕು ನೋಟ

ಪಾತಕಿ ಅತೀಖ್ ಅಹಮದ್​ ಜತೆಗೆ ಸಹೋದರ ಅಶ್ರಫ್ ಅಹಮದ್ ಕೂಡ ಗುಂಡಿಗೆ ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
