ಛತ್ತೀಸ್​ಗಢ:ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಬಲೋದ ಬಜಾರ್-ಭಟಪರಾ ರಸ್ತೆಯ ಭಟಪರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಮಾರಿಯಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಭಟಪರದ ಎಸ್‌ಡಿಒಪಿ ಸಿದ್ಧಾರ್ಥ್ ಬಾಘೇಲ್ ಈ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಹಸುಗೂಸು ಸೇರಿ 5 ಮಂದಿ ದಾರುಣ ಅಂತ್ಯ
ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದ ನಿವಾಸಿಗಳಾದ ಸಂತ್ರಸ್ತರು ಅರ್ಜುನಿ ಪ್ರದೇಶದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಬಲೋಡಾಬಜಾರ್‌ನ ಅರ್ಜುನಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವೇಗವಾಗಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ 11 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ‘ದೆಹಲಿ ಚಲೋ’ ಎಂದ ಅಭಿಮಾನಿಗಳು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
