ನವದೆಹಲಿ/ಗ್ವಾಲಿಯರ್​:ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಇಂದು ಮಧ್ಯಪ್ರದೇಶದಕ್ಕೆ ಕರೆತರಲಾಗಿದೆ. ಕಳೆದ ಐದು ತಿಂಗಳ ಹಿಂದೆ ನಮೀಬಿಯಾದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.
12 ಚೀತಾಗಳನ್ನು ಹೊತ್ತ ವಾಯುಪಡೆಯ ವಿವಾನ ಇಂದು ಬೆಳಗ್ಗೆ 10 ಗಂಟೆಗೆ ಗ್ವಾಲಿಯರ್​ ವಾಯುನೆಲೆಯಲ್ಲಿ ಲ್ಯಾಂಡ್​ ಆಯಿತು. ಅಲ್ಲಿಂದ ಚೀತಾಗಳನ್ನು ಹೆಲಿಕಾಪ್ಟರ್​ ಮೂಲಕ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು.
ಒಟ್ಟು 12 ಚೀತಾಗಳಲ್ಲಿ 7 ಗಂಡು ಮತ್ತು 5 ಹೆಣ್ಣು ಚೀತಾಗಳಿವೆ. 12 ಚೀತಾಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುವ ಮುನ್ನ ಸುಮಾರು ಒಂದು ತಿಂಗಳ ಕಾಲ ಕ್ವಾರಂಟೈನ್​ನಲ್ಲಿ ಇರಿಸಲಾಗುವುದು. ಅವುಗಳನ್ನು ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್​​ ಅವರು ಕ್ವಾರಂಟೈನ್​ ಕೇಂದ್ರಕ್ಕೆ ಬಿಡುಗಡೆ ಮಾಡಿದರು.
ಸುಮಾರು 10 ಕ್ವಾರಂಟೈನ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಭಾರತೀಯ ವನ್ಯಜೀವಿ ಕಾನೂನಿನ ಪ್ರಕಾರ ದೇಶಕ್ಕೆ ಬರುವ ಪ್ರಾಣಿಗಳನ್ನು ಸುಮಾರು 30 ದಿನ ಕ್ವಾರಂಟೈನ್​ನಲ್ಲಿ ಇಡಬೇಕು.
ಅಂದಹಾಗೆ ಕಳೆದ ವರ್ಷ ಸೆ.17ರಂದು ನಮೀಬಿಯಾ ದೇಶದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಯಿತು. 8ರಲ್ಲಿ 5 ಹೆಣ್ಣು ಮತ್ತು 3 ಗಂಡು ಚೀತಾಗಳು. ನಮೀಬಿಯಾ ರಾಜಧಾನಿ ವಿಂಡ್ಹೋಕ್​ನಿಂದ ವಿಶೇಷವಾಗಿ ಡಿಸೈನ್​ ಮಾಡಲಾದ ಹುಲಿ ಮುಖದ ಬಿ-747 ಜಂಬೋ ಜೆಟ್​ನಿಂದ ಚೀತಾಗಳನ್ನು ಕರೆತರಲಾಯಿತು. ಅವುಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಜನ್ಮದಿನದಂದೇ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾವನಕ್ಕೆ ಬಿಟ್ಟರು.
70 ವರ್ಷಗಳ ಹಿಂದೆಯೇ ಅಳಿದು ಹೋಗಿದ್ದ ಚೀತಾ ಸಂತತಿಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಭಾರತಕ್ಕೆ ಚೀತಾಗಳನ್ನು ಕರೆತರಲಾಗಿದೆ. ಇದಕ್ಕಾಗಿ ಪ್ರಾಜೆಕ್ಟ್​ ಚೀತಾ ಹೆಸರಿನಲ್ಲಿ ಭಾರತವು ನಮೀಬಿಯಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ.(ಏಜೆನ್ಸೀಸ್​)
ಸಂಧಾನ ಮೂಲಕ ಸಾರಾ ಮಹೇಶ್​-ರೋಹಿಣಿ ಸಿಂಧೂರಿ ಜಟಾಪಟಿ ಅಂತ್ಯ: ಸತ್ಯಕ್ಕೆ ಜಯ ಅಂದ್ರು JDS ಶಾಸಕ

ಸ್ಕೂಟರ್​ ಬೆಲೆ 1 ಲಕ್ಷ…. ಫ್ಯಾನ್ಸಿ ನಂಬರ್​ಗೆ​​ ಓನರ್ ಹರಾಜು ಕೂಗಿದ ಹಣದ ಮೊತ್ತ ಕೇಳಿದ್ರೆ ದಂಗಾಗ್ತೀರಾ!

ಶಾಸಕ ಸತೀಶ್​ ರೆಡ್ಡಿ ಮುಗಿಸಲು 2 ಕೋಟಿ ರೂ. ಡೀಲ್! ಲೀಕ್​ ಆದ ಆಡಿಯೋದಿಂದ ಉಳಿಯಿತು ಎಂಎಲ್​ಎ ಪ್ರಾಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 19 =
Remember me
