ಬಿಹಾರ:ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ನೋಡ ನೋಡುತ್ತಿದ್ದಂತೆ ಕುಸಿದಿದ್ದು, ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಲಾದ ಕಾಂಕ್ರೀಟ್ ಸೇತುವೆ ಕ್ಷಣಮಾತ್ರಗಳಲ್ಲಿ ನೆಲಸಮಗೊಂಡಿದೆ.
ಇದನ್ನೂ ಓದಿ:ಟ್ರಾವೆಲ್ ಬುಕಿಂಗ್ ಕಂಪನಿ ಷೇರು ಪಟ್ಟಿಯಾದ ಮೊದಲ ದಿನವೇ 78% ಏರಿಕೆ; ಹೂಡಿಕೆದಾರರಿಗೆ ಬಂಪರ್​ ಲಾಭ
ವೇಗವಾಗಿ ಹರಿಯುವ ಬಕ್ರಾ ನದಿಯ ಸೇತುವೆ ಒಂದು ಬದಿಗೆ ವಾಲಿರುವುದು ದೃಶ್ಯದಲ್ಲಿ ಕಾಣಬಹುದು. ಸೇತುವೆ ಕುಸಿಯುತ್ತಿರುವ ವೇಳೆ ನದಿಯ ದಡದಲ್ಲಿ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಘಟನೆಯನ್ನು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಕುಸಿತದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಮತ್ತು ಗಾಯಗಳು ವರದಿಯಾಗಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣದ ಅನುಕೂಲಕ್ಕಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು.
12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದೀಗ ಉದ್ಘಾಟನೆಗೂ ಮುನ್ನವೇ ಕುಸಿದಿದೆ. “ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿತ ಕಂಡಿದೆ. ಈ ಬಗ್ಗೆ ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಸಿಕ್ತಿ ಶಾಸಕ ವಿಜಯ್ ಕುಮಾರ್ ಹೇಳಿದ್ದಾರೆ,(ಏಜೆನ್ಸೀಸ್).
ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 9 =
Remember me
