ನವದೆಹಲಿ:ರೆಮಲ್​ ಚಂಡಮಾರುತದ ಎಫೆಕ್ಟ್​ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರ ಪರಿಣಮವಾಗಿ ಸುರಿದ ಭಾರೀ ಮಳೆಗೆ ಕಲ್ಲು ಕ್ವಾರಿಯೊಂದು ಕುಸಿದು 12 ಮಂದಿ ಮೃತಪಟ್ಟಿರುವ ಘಟನೆ ಮಿಜೋರಾಂನ ರಾಜಧಾನಿ ಐಜ್ವಾಲ್​ನಲ್ಲಿ ನಡೆದಿದೆ.
ನಿರಂತರವಾಗಿ ಮಳೆ ಸುರಿದ ಪರಿಣಾಮ ದುರ್ಘಟನೆ ಸಂಭವಿಸಿದ್ದು, 12 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
The North East has been battered by Cyclone Remal. Multiple landslides across Manipur, Mizoram, Assam, Meghalaya. At least 16 dead, many more injured. Road connectivity disrupted, power supply in Lower Assam, including Guwahati, completely disrupted. (No deaths below incident)pic.twitter.com/dVv5LddoEq
ಇದನ್ನೂ ಓದಿ:ರಣವೀರ್​ ನಾಚಿಕೆ ಇಲ್ಲದವ, ಪ್ಯಾಂಟ್​ ಧರಿಸದೆ ನನ್ನ ಪಕ್ಕದಲ್ಲಿ ಕೂರುತ್ತಿದ್ದ: ಪರಿಣೀತಿ ಚೋಪ್ರಾ
ಈ ಕುರಿತು ಪ್ರತಿಕ್ರಿಯಿಸಿರುವ ಎಸ್​ಡಿಆರ್​ಎಫ್​​ ಅಧಿಕಾರಿಯೊಬ್ಬರು, ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಮೃತರ ಶವಗಳನ್ನು ಹೊರತೆಗೆಯಲಾಗಿದೆ. ಆದಾಗ್ಯೂ, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ನಿರಂತರ ಮಳೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ. ಹುಂತಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಭೂಕುಸಿತದಿಂದಾಗಿ ಐಜ್ವಾಲ್ ದೇಶದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದಿಂದಾಗಿ ವಿವಿಧ ಅಂತರ್-ರಾಜ್ಯ ಹೆದ್ದಾರಿಗಳು ಸಹ ಅಸ್ತವ್ಯಸ್ತಗೊಂಡಿವೆ ಎಂದು ಎಸ್​ಡಿಆರ್​ಎಫ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
