ತೆಲಂಗಾಣ:ಕೆ. ಚಂದ್ರಶೇಖರ ರಾವ್(K Chandrashekar Rao)ನೇತೃತ್ವದ ಬಿಆರ್‌ಎಸ್(BRS)ಪಕ್ಷದಿಂದ 12ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಇಂದು ಕಾಂಗ್ರೆಸ್(Congress)ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ಯೂಟ್ಯೂಬ್​ನಲ್ಲಿ ಲೈಕ್​ ಮಾಡಿ ಹಣ ಗಳಿಸಿ; 49 ಲಕ್ಷ ರೂ. ಕಳೆದುಕೊಂಡ ಟೆಕ್ಕಿ​!
ತೆಲಂಗಾಣ(Telangana)ಸಿಎಂ ಕೆ. ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಯ(ಬಿಆರ್‌ಎಸ್) 12ಕ್ಕೂ ಹೆಚ್ಚು ಮಾಜಿ ಶಾಸಕರು, ಸಚಿವರು ಮತ್ತು ಪದಾಧಿಕಾರಿಗಳು ಸೋಮವಾರ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿರುವುದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge)ಮತ್ತು ರಾಹುಲ್ ಗಾಂಧಿ(Rahul Gandhi),ಸೋಮವಾರ ಪಕ್ಷಕ್ಕೆ ಸೇರ್ಪಡೆಗೊಂಡ 12ಕ್ಕೂ ಹೆಚ್ಚು ಮಾಜಿ ಶಾಸಕರು, ಸಚಿವರನ್ನು ಸ್ವಾಗತಿಸಿದರು. ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕರಾದ ಪಣ್ಯಂ ವೆಂಕಟೇಶ್ವರಲು, ಕೋರಂ ಕನಕಯ್ಯ, ಕೋಟ ರಾಮ್ ಬಾಬು ಸೇರಿದಂತೆ ಇನ್ನು ಹಲವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಉಚಿತ ಸಾರಿಗೆ ಬಸ್ ಪ್ರಯಾಣ; ಅಪ್ಪು ಸಮಾಧಿ ನೋಡಲು ಹರಿದು ಬಂದ ಮಹಿಳಾ ಅಭಿಮಾನಿಗಳ ದಂಡು!
ಈ ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nithish Kumar)ಪಾಟ್ನಾದಲ್ಲಿ ಕರೆದಿದ್ದ ಸಭೆಯಲ್ಲಿ ದೇಶದ ಬಹುತೇಕ ಎಲ್ಲ ಪ್ರಮುಖ ವಿರೋಧ ಪಕ್ಷಗಳ ನಾಯಕರು ಹಾಜರಾಗಿದ್ದರು. ಆದ್ರೆ, ಬಿಆರ್‌ಎಸ್ ಗೈರು ಹಾಜರಾದ ಬೆನ್ನಲ್ಲೇ ಇದೀಗ ನಾಯಕರು ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − five =
Remember me
