ಜೈಪುರ:ಚಿಕ್ಕ ಮಕ್ಕಳು ಕೂಡ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣ ಮುಂದುವರಿದಿದ್ದು, ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ 12 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಪ್ರಾಣ ಬಿಟ್ಟ ಪ್ರಕರಣ ವರದಿಯಾಗಿದೆ. ರಾಜಸ್ಥಾನದ ಜೈಪುರದಲ್ಲಿ ಈ ದುರಂತ ಸಂಭವಿಸಿದೆ.
ರಾಜಸ್ಥಾನದ ಬಿಕನೇರ್​ನ ಖಾಸಗಿ ಶಾಲೆಯ ವಿದ್ಯಾರ್ಥಿ ಇಶಾನ್ ಸಾವಿಗೀಡಾದ ಬಾಲಕ. ವಲ್ಲಭನಗರ ನಿವಾಸಿ ಆಗಿದ್ದ ಈತ ಇಲ್ಲಿನ ಸರ್ದುಲ್​ಗಂಜ್​ನ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಪಾಠದಲ್ಲಷ್ಟೇ ಅಲ್ಲದೆ ಆಟದಲ್ಲೂ ಈ ಬಾಲಕ ಚುರುಕಾಗಿದ್ದ.
ಇದನ್ನೂ ಓದಿ:ಪ್ಯಾಲೆಸ್ತೀನಿಯರನ್ನು ಬೆಂಬಲಿಸಿ ಸರ್ಕಾರಿ ಅಧಿಕಾರಿಯಿಂದಲೇ ಉಪವಾಸಕ್ಕೆ ಕರೆ!: ಯತ್ನಾಳ್
ಈತ ಓಟದ ಸ್ಪರ್ಧೆಯೊಂದರಲ್ಲಿ ಭಾಗಿಯಾಗಿದ್ದು, ಇನ್ನೇನು ಓಟ ಮುಗಿಸಬೇಕು ಎನ್ನುವಷ್ಟರಲ್ಲಿ ಕುಸಿದು ಬಿದ್ದು ಮೂರ್ಛೆ ಹೋಗಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹುಡುಗ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕನ ತಂದೆ ಅಶೋಕ್ ಕುಮಾರ್ ಖತ್ರಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ಸರ್ಕಾರದಿಂದ ಹೊಸ ಆದೇಶ

#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seventeen =
Remember me
