ಛತ್ತೀಸ್‌ಘಡ:ಅಮ್ಮನ ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಉಲ್ಲಾಸದಲ್ಲಿ ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಸೀರೆಯ ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಘಡದ ಪರಶುರಾಮಪುರ ಗ್ರಾಮದಲ್ಲಿ ನಡೆದಿದೆ.
ಅಮ್ಮನ ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಸೀರೆ ಸುತ್ತಿಕೊಂಡಿದೆ. ಈ ಪರ ಪರಿಣಾಮ ಉಸಿರುಗಟ್ಟಿ ಆಕೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಾಲಕಿಯ ಸ್ಥಿತಿಯನ್ನು ಗಮನಿಸಿದ ಆಕೆ ಅಣ್ಣ ತಂಗಿಯನ್ನು ಕಂಡ ಕೂಡಲೇ ಅಲ್ಲೇ ಹತ್ತಿರದಲ್ಲಿರುವ ರಾಮಾನುಜನಗರ ಹೆಲ್ತ್‌ ಕೇರ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ:ಲೈಂಗಿಕತೆ ಬಗ್ಗೆ ಪ್ರಬಂಧ ಬರೆಯಲು ಸ್ಟೂಡೆಂಟ್ಸ್‌ಗೆ ಶಿಕ್ಷಕರ ಸೂಚನೆ! ಪೋಷಕರ ಆಕ್ರೋಶ
ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಳು ಎಂದು ವೈದ್ಯರು ಘೋಷಿಸಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ:ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ 10ರೂ. ನೀಡಿದ 60 ವರ್ಷದ ಅಜ್ಜ!
ಸೀರೆಯಲ್ಲಿ ಬಾಲಕಿಯ ಕುತ್ತಿಗೆ ಸಿಕ್ಕಿಹಾಕಿಕೊಂಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಮೃತಳ ತಂದೆ ಸುರ್ದಿರ್ ಸಿಂಗ್ ತಿಳಿಸಿದ್ದಾರೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
