ಗೋಪಾಲ್​​ಗಂಜ್:ಮೊಬೈಲ್​ನಲ್ಲಿ ಗೇಮ್​ ಆಡಬೇಡ ಎಂದು ತಾಯಿ ನಿರ್ಬಂಧ ಹೇರಿದ್ದಕ್ಕೆ 12 ವರ್ಷದ ಮಗುವೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ.
ಇದನ್ನೂ ಓದಿ:ಸಾವಿನಲ್ಲೂ ಸಾರ್ಥಕತೆ: 4 ಜನರ ಬಾಳಿಗೆ ಬೆಳಕಾದ ಮಹಿಳೆ..ಭರೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊರೆಯನ್ ದೀಕ್ಷಿತ್ ಗ್ರಾಮದ ನಿವಾಸಿ. ಅವರು ಐದನೇ ತರಗತಿಯಲ್ಲಿ ಓದುತ್ತಿದ್ದಾರೆ. ಮೊಬೈಲ್ ಚಟಕ್ಕೆ ಬಿದ್ದಿದ್ದ ಈತ ಮೊಬೈಲ್ ನಲ್ಲಿ ನಿರಂತರವಾಗಿ ಗೇಮ್ ಆಡುತ್ತಿದ್ದ. ಈ ಹಿಂದೆಯೂ ಕುಟುಂಬಸ್ಥರು ಹಲವು ಬಾರಿ ಛೀಮಾರಿ ಹಾಕಿದ್ದರು. ಆದರೆ ಈ ಬಾರಿ ತಾಯಿ ಆತನಿಗೆ ಬೈದಿದ್ದು ಮೊಬೈಲ್​ ಬಳಸದಂತೆ ನಿರ್ಬಂಧ ಹೇರಿದ್ದು, ಇದರಿಂದ ಕೋಪಗೊಂಡ ಮಗು ಮನೆಯಲ್ಲಿಟ್ಟಿದ್ದ ಕೀಟನಾಶಕ ಸೇವಿಸಿದೆ.ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲಗಂಜ್ ಸದರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿರುವ ವೈದ್ಯರು, ಮಗುವಿನ ಸ್ಥಿತಿ ಇನ್ನೂ ಗಂಭೀರವಾಗಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಮಗುವನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಧ್ಯರಾತ್ರಿಯಲ್ಲಿ ಗೆಳತಿ ನೋಡಲು ಬಂದ ಪ್ರಿಯಕರ: ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ..ಈ ಡಿಜಿಟಲ್ ಯುಗದಲ್ಲಿ, ಪ್ರತಿ ಮಗುವಿನ ಕೈಯಲ್ಲಿ ಮೊಬೈಲ್ ಫೋನ್ ಕಾಣುತ್ತಿದ್ದು ಇದರ ಅತಿಯಾದ ಬಳಕೆ ಕೆಲವೊಮ್ಮೆ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಗೋಪಾಲಗಂಜ್‌ನಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದು, ಪಾಲಕರನ್ನು ಚಿಂತೆಗೀಡು ಮಾಡಿದೆ.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:six − 4 =
Remember me
