ಗಾಂಧಿನಗರ:ರೈತರ ಆದಾಯವನ್ನು 2022ರೊಳಗೆ ದ್ವಿಗುಣಗೊಳಿಸಲು ಅನೇಕ ಪ್ರಯತ್ನ ಮತ್ತು ಹೆಜ್ಜೆಗಳನ್ನು ಇಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಗುಜರಾತ್​ನ ಗಾಂಧಿನಗರದಲ್ಲಿ ಮಂಗಳವಾರ ನಡೆದ 3ನೇ ಜಾಗತಿಕ ಆಲೂಗೆಡ್ಡೆ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ಮಾತನಾಡಿದರು.
ಆರು ಕೋಟಿ ರೈತರ ಖಾತೆಗಳಿಗೆ ನೇರವಾಗಿ 12 ಸಾವಿರ ಕೋಟಿ ರೂ. ಜಮಾ ಆಗುವ ಮೂಲಕ ಈ ತಿಂಗಳ ಆರಂಭದಲ್ಲೇ ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ ಎಂದು ತಿಳಿಸಿದರು.
ಮೂರನೇ ಜಾಗತಿಕ ಆಲೂಗೆಡ್ಡೆ ಸಮಾವೇಶವು ಗುಜರಾತಿನಲ್ಲಿ ನಡೆದಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ದೇಶದಲ್ಲಿ ಆಲೂಗೆಡ್ಡೆ ಉತ್ಪಾದನೆಯಲ್ಲಿ ರಾಜ್ಯವು ಮೊದಲನೇ ಸ್ಥಾನದಲ್ಲಿದೆ. ಕಳೆದ 11 ವರ್ಷಗಳಿಂದ ಆಲೂಗೆಡ್ಡೆ ಬೆಳೆಯುವ ಏರಿಯಾ ಅಂದಾಜು ಶೇ. 20ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಗುಜರಾತಿನಲ್ಲಿ ಅಂದಾಜು ಶೇ 170 ರಷ್ಟು ಏರಿಕೆಯಾಗಿದೆ ಎಂದು ಹೇಳಿದರು.
ಕೆಲವು ವಿಶಿಷ್ಠ ಆಹಾರ ಉತ್ಪನ್ನ ಮತ್ತು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಪ್ರಮುಖ ಮೂರು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ. ಅದಕ್ಕೆ ಕಾರಣ ರೈತರ ಶ್ರಮ ಮತ್ತು ಸರ್ಕಾರ ನಿಯಮಗಳು ಎಂದು ಪ್ರಧಾನಿ ತಿಳಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 13 =
Remember me
