ಲಖನೌ:ಪೊಲೀಸ್‌ ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಉತ್ತರ ಪ್ರದೇಶ 6,126 ಎನ್‌ಕೌಂಟರ್‌ಗಳು ನಡೆದಿವೆ.ಈ ಎನ್‌ಕೌಂಟರ್‌ಗಳಲ್ಲಿ 122 ಅಪರಾಧಿಗಳು ಹತರಾಗಿದ್ದರೆ, 13 ಮಂದಿ ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಪೊಲೀಸ್‌ ಇಲಾಖೆಯ ಕಾನೂನು ಸುವ್ಯವಸ್ಥೆಯ ಡಿ.ಜಿ. ಪ್ರಶಾಂತ್‌ ಕುಮಾರ್ ಮಾಧ್ಯಮವೊಂದಕ್ಕೆ ಈ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ 2017ರ ಮಾರ್ಚ್‌ 20ರಿಂದ‌ 2020ರ ಜುಲೈ 10ರ ನಡುವಿನ ಅವಧಿಯಲ್ಲಿ ನಡೆದಿರುವ ಎನ್‌ಕೌಂಟರ್‌ಗಳು ಇವು. ಇದರಲ್ಲಿ 2,296 ಆರೋಪಿಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಅವಧಿಯಲ್ಲಿ 13,361 ಮಂದಿಯನ್ನು ಬಂಧಿಸಲಾಗಿದ್ದು, ಎನ್‌ಕೌಂಟರ್‌ಗಳಲ್ಲಿ 909 ಪೊಲೀಸರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯನ್ನು ಪ್ರಶಾಂತ್‌ಕುಮಾರ್‌ ನೀಡಿದ್ದಾರೆ.
ಇದನ್ನೂ ಓದಿ:ಕೇಸರಿ ಬಟ್ಟೆ, ತಿಲಕ ವಿರೋಧಿಸಿ ಮುಸ್ಲಿಂ ವ್ಯಕ್ತಿಯಿಂದ ಥಳಿತ; ಸನ್ಯಾಸಿಯ ಸಾವು!
ಎಂಟು ಪೊಲೀಸರನ್ನು ಹತ್ಯೆ ಮಾಡಿದ ಕುಖ್ಯಾತ ರೌಡಿ ವಿಕಾಸ್‌ ದುಬೆ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಂತರ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪ್ರಶಾಂತ್‌ ಕುಮಾರ್‌ ಹೇಳಿದ್ದಾರೆ.
ಕರೊನಾ: ಭಾರತೀಯ ವಿಜ್ಞಾನ ಸಂಸ್ಥೆಯಿಂದ ಬಂದಿದೆ ಭಯಾನಕ ಮಾಹಿತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + three =
Remember me
