ಪಾಲಕ್ಕಾಡ್​:ಅಂಗಡಿ ಒಂದರಲ್ಲಿ ಆಹಾರ ಪದಾರ್ಥ ಕಳ್ಳತನ ಮಾಡಿದ್ಧಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ್ದ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು 13 ಮಂದಿ ಆರೋಪಿಗಳಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಅಟ್ಟಪಡಿ ನಿವಾಸಿ ಮಧು ಎಂಬುವವರನ್ನು ಗುಂಪೊಂದು 22 ಫೆಬ್ರವರಿ 2018ರಲ್ಲಿ ಹೊಡೆದು ಕೊಂದಿತ್ತು. ಪೊಲೀಸ್​ ತನಿಖೆ ಬಳಿಕ ಐದು ವರ್ಷಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿದ್ದ 13 ಮಂದಿಯನ್ನು ದೋಷಿ ಎಂದು ಪರಿಗಣಿಸಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಪ್ರಮಾಣವನ್ನು ನ್ಯಾಯಮೂರ್ತಿ ಕೆ.ಎಂ.ರತೀಶ್​ ಕುಮಾರ್​ ಪ್ರಕಟಿಸಿದ್ದಾರೆ.
ಇದನ್ನೂ ಓದಿ:ಗಾಂಧೀಜಿ, ಹಿಂದೂ-ಮುಸ್ಲಿಂ ಭಾವೈಕ್ಯತೆ, RSS ನಿಷೇಧ ಕುರಿತ ಅಂಶಗಳನ್ನು ಕೈ ಬಿಟ್ಟ NCERT; ವ್ಯಾಪಕ ಖಂಡನೆ
ಈ ಕುರಿತು ಪ್ರತಿಕ್ರಿಯಿಸಿರುವ ವಕೀಲರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು. 7 ವರ್ವ ಶಿಕ್ಷೆಗೆ ಗುರಿಯಾಗಿಸಿರುವ ಬಗ್ಗೆ ಬೇಸರವಿದೆ ಈ ಕುರಿತು ರಾಜ್ಯ ಸರ್ಕಾರ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವ ವಿಶ್ವಾಸವಿದೆ ಎಂದು ಪಬ್ಲಿಕ್​ ಪ್ರಾಸಿಕ್ಯೂಟರ್​ ರಾಜೇಶ್​ ಮೆನನ್ ಹೇಳಿದ್ಧಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಧು ಸಹೋದರಿ ಆರೋಪಿಗಳಿಗೆ ನೀಡಿರುವ ಶಿಕ್ಷೆ ನಮಗೆ ತೃಪ್ತಿಕರವಾಗಿಲ್ಲ. ನಿಜವಾಗಿ ಏನಾಗಿದೆ ಎಂಬುದು ನ್ಯಾಯಾಲಯಕ್ಕೆ ತಿಳಿದು ಬಂದಿಲ್ಲ. ನ್ಯಾಯಾಲಯವು ನಮ್ಮ ಹಿತಾಸಕ್ತಿಗಳನ್ನು ಕಾಪಾಡುತದೆಂದು ಉದ್ದೇಶಿಸಲಾಗಿತ್ತು. ಆದರೆ, ಅದು ನಡೆದಿಲ್ಲ ಎಂದು ತೀರ್ಪಿನ ಕುರಿತು ಮಧು ಸಹೋದರಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
