ಧಾರ್​:ನದಿಗೆ ಬಸ್​ ಉರುಳಿದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, 15 ಜನರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರ ಸಾರಿಗೆ ಬಸ್​ ಇದಾಗಿದ್ದು, ಮಧ್ಯಪ್ರದೇಶ ಧಾರ್​ ಜಿಲ್ಲೆಯ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಬಸ್​ ನರ್ಮದಾ ನದಿಯಲ್ಲಿ ಉರುಳಿದೆ.
ಇಂದೋರ್​ನಿಂದ ಪುಣೆಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ, ಏಕಾಏಕಿ​​ ಸೇತುವೆ ಮೇಲಿಂದ ನದಿಗೆ ಉರುಳಿದೆ. ಸೋಮವಾರ ಮುಂಜಾನೆ ಈ ಅವಘಡ ಸಂಭವಿಸಿದ್ದೆದು, ಸದ್ಯ ಬಸ್ಸನ್ನು ನದಿಯಿಂದ ಹೊರತೆಗೆಯಲಾಗಿದೆ. ಉಳಿದ 15ಮಂದಿಯನ್ನು ರಕ್ಷಿಸಲಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿನಲ್ಲಿ 40 ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಎನ್​ಡಿಆರ್​ಎಫ್​ ತಂಡದಿಂದ ರಕ್ಷಣಾ ಕಾರ್ಯ ನಡೆಸಲಾಯಿತು. ಈ ಭಾಗದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಘಟನೆಗೆ ಇದೂ ಒಂದು ಕಾರಣ ಎನ್ನಲಾಗಿದೆ.(ಏಜೆನ್ಸೀಸ್​)
ವಿಶ್ವ ಎಮೋಜಿ ದಿನ 2022: ಅತಿ ಹೆಚ್ಚು ಬಳಕೆಯಾಗುವ ಎಮೋಜಿಗಳ ಪಟ್ಟಿ ಇಲ್ಲಿವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
