ಪಾಟ್ನಾ:ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ಆರೋಪಗಳು ಇದೀಗ ದೇಶದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಒಂದೆಡೆ ಇದರಿಂದ ತಮಗೆ ಅನ್ಯಾಯವಾಗಿದೆ, ಪ್ರಕರಣವನ್ನು ಸಿಬಿಐಗೆ ವಹಿಸಿ, ತನಿಖೆ ಪಾರದರ್ಶಕವಾಗಿರಲಿ ಎಂದು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 9 ಲಕ್ಷಕ್ಕೂ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿ-ನೆಟ್​ ಪರೀಕ್ಷೆ ಬರೆದಿದ್ದು, ತೀವ್ರ ವಿವಾದ ಮತ್ತು ಪರೀಕ್ಷೆಗೂ ಮುನ್ನ ಪತ್ರಿಕೆ ಸೋರಿಕೆಯಾದ ಬಗ್ಗೆ ನಡೆಯುತ್ತಿರುವ ತನಿಖೆಯ ಹೊರತಾಗಿಯೂ ಇದೀಗ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಅನ್ನು ರದ್ದುಗೊಳಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ:ಹುಣಸೆಹಣ್ಣಿನಲ್ಲಿ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿದ್ಯಾ?; ಇಲ್ಲಿದೆ ಉಪಯುಕ್ತ ಮಾಹಿತಿ
ವೈದ್ಯಕೀಯ ಪ್ರವೇಶ ಪರೀಕ್ಷೆಯ ನೀಟ್‌ನ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಹಾರದಲ್ಲಿ ಬಂಧಿತರಾಗಿರುವ ಮೂವರು ಯುವಕರು ಬಳಿ ಎಲ್ಲಾ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರ ಪತ್ರಿಕೆಗಳ ನಕಲುಗಳಿದ್ದವು ಎಂದು ಪೊಲೀಸರು ತಮ್ಮ ತನಿಖಾ ವರದಿಯನ್ನು ಕಳುಹಿಸಿದ ನಂತರ ಮಾನವ ಸಂಪನ್ಮೂಲ ಸಚಿವಾಲಯದ ಮೂಲಗಳು ಈ ಮಾಹಿತಿ ಹಂಚಿಕೊಂಡಿವೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇದುವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ನೀಟ್‌ ಅಭ್ಯರ್ಥಿಗಳ ಪ್ರವೇಶ ಪತ್ರ, ಐಫೋನ್‌ 15 ಪ್ಲಸ್‌ ಮತ್ತು ಒನ್‌ ಪ್ಲಸ್‌ ಮೊಬೈಲ್‌ ಫೋನ್​ಗಳನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಕಂದರ್ ಯಡ್ವೆಂದು, ಅಖಿಲೇಶ್ ಕುಮಾರ್ ಮತ್ತು ಬಿಟ್ಟು ಕುಮಾರ್ ಎಂಬ ಮೂವರನ್ನು ವಿಚಾರಣೆ ಮಾಡಿದ ಪೊಲೀಸರು, ನಾಲ್ಕು ಅಭ್ಯರ್ಥಿಗಳಿಗೆ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಹಂಚಿರುವ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.
ಇದನ್ನೂ ಓದಿ:ಶಿವ ರಾಜ್‌ಕುಮಾರ್ ನಾಯಕನಾಗಿ ಕನ್ನಡ, ತೆಲುಗು ದ್ವಿಭಾಷಾ ಚಿತ್ರ!
ಸಂಜೀವ್ ಸಿಂಗ್, ರಾಕಿ ಮತ್ತು ಅಮಿತ್ ಆನಂದ್ ಎಂಬ ಬಂಧಿತ ವ್ಯಕ್ತಿಗಳು ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ. ಇವರೊಟ್ಟಿಗೆ 25-30 ಅಭ್ಯರ್ಥಿಗಳು ಸಹ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿದ್ದಾರೆ ಎಂದು ಅಭ್ಯರ್ಥಿಗಳ ವಿಚಾರಣೆಯಿಂದ ತಿಳಿದುಬಂದಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರತಿ ಅಭ್ಯರ್ಥಿಯಿಂದ 30ರಿಂದ 40 ಲಕ್ಷ ರೂ. ಪಡೆದಿರುವುದಾಗಿ ಬಂಧಿತರು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ,(ಏಜೆನ್ಸೀಸ್).
ರೇಣುಕಸ್ವಾಮಿ ನನಗೂ ಇಂಥದ್ದೇ ಸಂದೇಶ ಕಳಿಸಿದ್ದ; ಸಾಕ್ಷಿ ಸಮೇತ ವಿವರಿಸಿದ ನಟಿ ಚಿತ್ರಾಲ್ ರಂಗಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
