ವಡೋದರಾ:ಗುಜರಾತ್​ನ ವಡೋದರಾದಲ್ಲಿರುವ ಹರಣಿ ಸರೋವರದಲ್ಲಿ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಪ್ರವಾಸಕ್ಕೆಂದು ವಡೋದರಾದ ಹರಣಿ ಸರೋವರಕ್ಕೆ ಬಂದಿದ್ದ ಖಾಸಗಿ ಶಾಲೆಯ 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೈಫ್​ ಜಾಕೆಟ್​ ಧರಿಸದೆ ದೋಣಿಯಲ್ಲಿ ವಿಹರಿಸುತ್ತಿದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH| Gujarat: A boat carrying children capsized in Vadodara's Harni Motnath Lake. Rescue operations underway.pic.twitter.com/gC07EROBkh
ಇದನ್ನೂ ಓದಿ:ಇದು ನನ್ನದಲ್ಲವೇ ಅಲ್ಲಾ; ನಟಿ ರುಕ್ಮಿಣಿ ವಸಂತ್ ಹೀಗಂದಿದ್ಯಾಕೆ
ಈ ಕುರಿತು ಸಂತಾಪ ಸೂಚಿಸಿ ಟ್ವೀಟ್​ ಮಾಡಿರುವ ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಮಕ್ಕಳು ಮುಳುಗಿದ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಕರುಣಾಮಯಿ ಭಗವಂತ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಬೋಟ್‌ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣಾ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾವಿಗೀಡಾದವರು ನ್ಯೂ ಸನ್‌ರೈಸ್ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 16 ಮಂದಿ ಸಾಮರ್ಥ್ಯವಿರುವ ದೋಣಿಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಈ ಘಟನೆಯಲ್ಲಿ ಛಾಯಾ ಸೂರ್ತಿ ಮತ್ತು ಫಲ್ಗುಣಿ ಪಟೇಲ್ ಎಂಬ ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, 13 ಮಕ್ಕಳು ಮತ್ತು 2 ಶಿಕ್ಷಕರು ಅಸುನೀಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
વડોદરાના હરણી તળાવમાં બોટ પલટી જતાં બાળકોના ડૂબવાની ઘટના અત્યંત હૃદયવિદારક છે. જાન ગુમાવનાર નિર્દોષ બાળકોના આત્માની શાંતિ માટે પ્રાર્થના કરું છું.દુ:ખની આ ઘડીમાં તેમના પરિવારજનો પ્રત્યે આત્મીય સંવેદના વ્યક્ત કરું છું. પરમકૃપાળુ પરમાત્મા તેમને આ દુ:ખ સહન કરવાની શક્તિ આપે.…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + twelve =
Remember me
