ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 30ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಕಳೆದ ವರ್ಷ ದಕ್ಷಿಣ ಆಫ್ರಿಕಾದ ಸೆನಗಲ್​ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ಫೆ.22ರಂದು ಸಿಸಿಬಿ ಪೊಲೀಸರು ನಗರಕ್ಕೆ ಕರೆತಂದು ವಶಕ್ಕೆ ಪಡೆದಿದ್ದರು. ತಿಲಕ್​ನಗರದ ಕೊಲೆ ಪ್ರಕರಣ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ (ಮಾ.6) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯನ್ನು 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶಿಸಿದರು.
2007ರ ಫೆ 5ರಂದು ತಿಲಕ್​ನಗರದ ಶಬನಮ್ ಡೆವಲಪರ್ಸ್ ಮಾಲೀಕ ಸಮಿವುಲ್ಲಾ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅದಕ್ಕೆ ನಿರಾಕರಿಸಿದ್ದಕ್ಕೆ 2007ರ ಫೆ.15ರಂದು ತನ್ನ ಸಹಚರರನ್ನು ಬಿಟ್ಟು ಕಚೇರಿ ಮೇಲೆ ಗುಂಡಿನ ದಾಳಿ ನಡೆಸಿದ್ದ. ಈ ವೇಳೆ ಶಬನಮ್ ಡೆವಲೆಪರ್ಸ್​ನ ಉದ್ಯೋಗಿ ಶೈಲಜಾ ಹಾಗೂ ಕಾರು ಚಾಲಕ ರವಿ ಎಂಬುವರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿದಿದೆ.
ಅಲ್ಲದೆ ರವಿ ಪೂಜಾರಿ ವಿರುದ್ಧ ಕೊಲೆ, ಕೊಲೆಯತ್ನ, ಸುಲಿಗೆ, ಜೀವ ಬೆದರಿಕೆ ಸೇರಿ 47ಕ್ಕೂ ಹೆಚ್ಚು ಪ್ರಕರಣಗಳಿವೆ. ಈ ಎಲ್ಲ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಅಗತ್ಯ ಬಿದ್ದಾಗ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ವಶಕ್ಕೆ ಪಡೆಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ, ಕೇರಳ ಪೊಲೀಸರಿಂದ ಅರ್ಜಿ?
ಸಿಸಿಬಿ ಪೊಲೀಸರು ಪಾತಕಿ ರವಿ ಪೂಜಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ, ಆತನನ್ನು ವಶಕ್ಕೆ ಪಡೆಯಲು ಮುಂಬೈ ಮತ್ತು ಕೇರಳ ಪೊಲೀಸರು ಮುಂದಾಗಿದ್ದಾರೆ. ತನಗೆ ಜೀವ ಬೆದರಿಕೆ ಇದ್ದು, ಯಾವುದೇ ಕಾರಣಕ್ಕೂ ಮುಂಬೈ ಪೊಲೀಸರಿಗೆ ಹಸ್ತಾಂತರಿಸದಂತೆ ರವಿ ಪೂಜಾರಿ ಕೇಳಿಕೊಳ್ಳುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರವಿ ಪೂಜಾರಿ ವಿರುದ್ಧ ಮುಂಬೈನಲ್ಲಿ 50ಕ್ಕೂ ಹೆಚ್ಚು ಪ್ರಕರಣಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 17 =
Remember me
