ರಾಂಚಿ:ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 14 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನಾಬಾದ್​ನಲ್ಲಿ ನಿನ್ನೆ (ಜ. 31) ರಾತ್ರಿ ನಡೆದಿದೆ.
ಸದ್ಯ ಮಾಹಿತಿ ಮೇರೆಗೆ ಮೃತರ ಸಂಖ್ಯೆ 14 ಆಗಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನೆ ನಿಖರವಾದ ಕಾರಣ ತಿಳಿದುಬರಬೇಕಿದೆ ಎಂದು ಜಾರ್ಖಂಡ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಖದೇವ್​ ಸಿಂಗ್​ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೃತ 14 ಮಂದಿಯಲ್ಲಿ 10 ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ತಿಳಿದುಬಂದಿದೆ.
ಘಟನೆಯ ಬೆನ್ನಲ್ಲೇ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಧನಾಬಾದ್​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ಉಂಟು ಮಾಡಿದೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಜಾರ್ಖಂಡ್​ ಸಿಎಂ ಹೇಮಂತ್​ ಸೊರೆನ್​ ಸಹ ಟ್ವೀಟ್​ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಧನಾಬಾದ್​ನಲ್ಲಿ ಅಗ್ನಿ ಅವಘಡದಿಂದ ಜನರು ಮೃತಪಟ್ಟಿದ್ದು, ನಿಜಕ್ಕೂ ಹೃದಯವಿದ್ರಾವಕವಾಗಿದೆ. ಜಿಲ್ಲಾಡಳಿತವು ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯನಿರ್ವಹಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾನೇ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇನೆ ಎಂದಿದ್ದಾರೆ.
ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಜನನಿಬಿಡ ನಗರವಾದ ಜೋರಾಫಟಕ್‌ನಲ್ಲಿರುವ 13 ಅಂತಸ್ತಿನ ಕಟ್ಟಡ, “ಆಶೀರ್ವಾದ್ ಟವರ್​​”ನಲ್ಲಿ ನಿನ್ನೆ (ಜ.31) ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಸುಮಾರು 40 ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕರೆಸಲಾಯಿತು. ಸದ್ಯ ಬೆಂಕಿಯನ್ನು ನಂದಿಸಲಾಗಿದೆ. ಈವರೆಗೆ 8 ಅಥವಾ 10 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಧನಾಬಾದ್​ ಉಪ ಆಯುಕ್ತರಾದ ಸಂದೀಪ್​ ಕುಮಾರ್​ ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ 0ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗುತ್ತಿದೆ. ಸದ್ಯ ರಕ್ಷಣಾ ಕಾರ್ಯ ಮುಗಿದಿದೆ. ಆದರೆ ನಾವಿನ್ನೂ ಮೃತಪಟ್ಟವರ ಸಂಖ್ಯೆಯ ಕುರಿತು ಸರಿಯಾದ ಎಣಿಕೆ ತೆಗೆದುಕೊಂಡಿಲ್ಲ. ಇದನ್ನು ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಜಂಟಿಯಾಗಿ ಮಾಡುತ್ತಾರೆ ಎಂದು ಸಂದೀಪ್​ ಕುಮಾರ್​ ತಿಳಿಸಿದರು.(ಏಜೆನ್ಸೀಸ್​)
ಸಂಕಷ್ಟದ ನಡುವೆಯೂ ಭಾರತ ವೇಗದ ಓಟ: ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ ಮಂಡನೆ

ಹರ್ಷಿಕಾ ಹರ್ಷದ ವರ್ಷ: 9 ಕನ್ನಡ, 2 ಭೋಜಪುರಿ, 1 ಮಲಯಾಳಂ ಚಿತ್ರ ರೆಡಿ

ಹಳೆಯ ಗಾಡಿ ಕೊಟ್ಟರೆ ಹಣದ ಜತೆ ತೆರಿಗೆ ರಿಯಾಯಿತಿ: ಹೊಸ ವಾಹನ ಖರೀದಿಸದಿದ್ದರೆ ಪರಿಚಿತರಿಗೆ ಕೊಡಲು ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
