ಥಾಯ್ಲೆಂಡ್:ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡು, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಥಾಯ್ಲೆಂಡ್‌ನ ಪ್ರಚುವಾಪ್ ಖಿರಿ ಖಾನ್ ಪ್ರಾಂತ್ಯದಲ್ಲಿ ಸೋಮವಾರ (ಡಿಸೆಂಬರ್ 4, 2023) ಮಧ್ಯರಾತ್ರಿ  ಈ ಘಟನೆ ನಡೆದಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದೆ. ಬಸ್ ಮರಕ್ಕೆ ಡಿಕ್ಕಿ ಹೊಡೆದು ಎರಡು ಭಾಗವಾಯಿತು. ಬಸ್‌ಗೆ ತೀವ್ರ ಹಾನಿಯಾಗಿದ್ದು, ಅವಶೇಷಗಳಡಿ ಸಿಲುಕಿದ್ದ ಸಂತ್ರಸ್ತರನ್ನು ಹೊರತೆಗೆಯಲು ರಕ್ಷಣಾ ತಂಡ ಶ್ರಮಿಸಿದೆ. ಬಸ್  ಬ್ಯಾಂಕಾಕ್​​ನಿಂದ ಸಾಂಗ್‌ಖ್ಲಾ ಪ್ರಾಂತ್ಯದ ನಥಾವಿ ಜಿಲ್ಲಿಗೆ ತೆರಳುತ್ತಿತ್ತು. ಈ ಭೀಕರವಾದ ಅಪಘಾತಕ್ಕೆ ಕಾರಣವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಅಪಘಾತದ ತೀವ್ರತೆಯಿಂದಾಗಿ ಬಸ್ ಎರಡು ಭಾಗವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣವನ್ನು ತನಿಖೆ ಮಾಡಲಾಗಿದೆ. ಬಸ್ ಅತಿ ವೇಗದಲ್ಲಿ ಸಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಹುಡುಗನನ್ನು ಮದುವೆ ಆಗಲಿದ್ದಾಳೆ ಪಾಕಿಸ್ತಾನಿ ವಧು; 45 ದಿನಗಳ ವೀಸಾ ನೀಡಿದ ಭಾರತ ಸರ್ಕಾರ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
