ಗುವಾಹಟಿ:ಬಸ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ. ಘಟನೆಯಲ್ಲಿ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗ್ಗೆ ಐದು ಘಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಸ್ ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದಾಗ ದೇರ್ಗಾಂವ್‌ ಬಳಿ ಅಪಘಾತವಾಗಿದೆ. ಬೆಳಗ್ಗೆ 5 ಘಂಟೆ ಸುಮಾರಿಗೆ ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯೊಂದು 45 ಪ್ರಯಾಣಿಕರಿದ್ದ ಬಸ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. 14 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Assam: At least 12 people died and 25 others injured after a bus collided with a truck in Golaghat district. The accident took place at around 5 am in Balijan area near Dergaon in Golaghat: Rajen Singh, Golaghat SPpic.twitter.com/1F9JavLkJh
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
