ಲಖನೌ:ಫಿರೋಜಾಬಾದ್​ ಬಳಿ ನಡೆದ ಬಸ್​ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದು ಹಲವ ಜನ ಗಾಯಗೊಂಡಿದ್ದಾರೆ. ಅದರಲ್ಲಿ 8 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಗ್ರಾ- ಲಖನೌಗೆ ಹೆದ್ದಾರಿಯಲ್ಲಿ ಖಾಸಗಿ ಬಸ್​ ಫಿರೋಜಾಬಾದ್​ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತ ಪಟ್ಟ 14 ಮಂದಿ ಅಲ್ಲದೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಪೊಲೀಸರು ಮಾಹಿತಿ ನೀಡಿದ್ದಾರೆ.
“ಬುಧವಾರ ರಾತ್ರಿ ಅಂದಾಜು 10ಗಂಟೆಗೆ ಅಪಘಾತ ಸಂಭವಿಸಿದೆ. ಖಾಸಗಿ ಸ್ಲೀಪರ್​ ಬಸ್​ ದೆಹಲಿಯಿಂದ ಬಿಹಾರದ ಮೋತಿಹರಿ ಕಡೆಗೆ ಹೊರಟಿತ್ತು. ಡಬಲ್​ ಡೆಕ್ಕರ್​ ಬಸ್​ ಹಿಂದಿನಿಂದ ಲಾರಿಗೆ ಗುದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್​ ಕುಮಾರ್​ ತಿಳಿಸಿದ್ದಾರೆ.
ಅಫಘಾತ ವಿಷಯ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳಕ್ಕೆ ತೆರಳಲು ಸೂಚಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twenty =
Remember me
